ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಮನಾಬಾದ್: ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ

ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘದ ಕಚೇರಿ ಉದ್ಘಾಟನೆ
Last Updated 8 ಜೂನ್ 2021, 2:02 IST
ಅಕ್ಷರ ಗಾತ್ರ

ಹುಮನಾಬಾದ್: ‘ಕ್ಷೇತ್ರದ ಅಭಿವೃದ್ಧಿಗಾಗಿ ಹಾಗೂ ಒಳ್ಳೆಯ ಕೆಲಸಕಾರ್ಯಗಳಿಗಾಗಿ ಸದಾ ನನ್ನ ಬೆಂಬಲ ಇರುತ್ತದೆ’ ಎಂದು ಶಾಸಕ ರಾಜಶೇಖರ ಪಾಟೀಲ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯದ ಪ್ರಥಮ ತಾಲ್ಲೂಕು ಘಟಕದ ಕಾರ್ಯಾಲಯವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

‘ತಾಲ್ಲೂಕು ಮಟ್ಟದಲ್ಲಿ ಈ ಕಾರ್ಯಾಲಯ ಪ್ರಾರಂಭಿಸಿರುವುದು ರಾಜ್ಯದಲ್ಲಿಯೇ ಪ್ರಥಮವಾಗಿದೆ. ಎಲ್ಲರೂ ಈ ಕಟ್ಟಡವನ್ನು ಸದುಪಯೋಗ ಪಡೆದುಕೊಂಡು, ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುವುದರ ಮೂಲಕ ಉತ್ತಮ ಅಧಿಕಾರಿಗಳಾಗಿ ಮೆಚ್ಚುಗೆಯನ್ನು ಪಡೆಯಬೇಕು’ ಎಂದು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಮಾತನಾಡಿ, ‘ಕೋವಿಡ್ ಸಂಕಷ್ಟದಲ್ಲಿ ಪಂಚಾಯಿತಿ ನೌಕರರು ತಮ್ಮ ಪ್ರಾಣದ ಹಂಗು ತೊರೆದು, ಗ್ರಾಮ ಮಟ್ಟದಲ್ಲಿ ಸ್ಚಚ್ಛತೆ ಹಾಗೂ ಸೋಂಕಿನ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಲ್ಲಿನ ಶ್ರಮ ಅಪಾರವಾಗಿದೆ. ಸೋಂಕು ಸಂಪೂರ್ಣವಾಗಿ ಇನ್ನೂ ನಾಶವಾಗಿಲ್ಲ. ಹಾಗಾಗಿ, ಸಾರ್ವಜನಿಕರು ನಿರ್ಲಕ್ಷ್ಯ ತೋರಬಾರದು’ ಎಂದು ಮನವಿ ಮಾಡಿದರು.

ಜಿ ಪಂ ಸದಸ್ಯ ಲಕ್ಷ್ಮಣರಾವ್ ಬುಳ್ಳಾ, ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಅಫ್ಸರ್‌ ಮಿಯ್ಯಾ, ಮಲ್ಲಿಕಾರ್ಜುನ ಮಾಶೆಟ್ಟಿ, ತಾ.ಪಂ ಇಒ ಡಾ.ಗೋವಿಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT