ಬೀದರ್: ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದ್ದು, ರಣಬಿಸಿಲಿನಿಂದ ಕಂಗೆಟ್ಟಿದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಅರ್ಧಗಂಟೆಗೂ ಹೆಚ್ಚು ಸಮಯ ಬಿರುಗಾಳಿ ಸಹಿತ ಸುರಿದ ಮಳೆಗೆ ಇಳೆ ತಂಪಾಗಿದೆ. ತಾಲ್ಲೂಕಿನ ಹಲವು ಕಡೆಗಳಲ್ಲೂ ಮಳೆಯಾಗಿದೆ.

ಔರಾದ್ ತಾಲ್ಲೂಕಿನ ಮಮದಾಪೂರ ಗ್ರಾಮದಲ್ಲಿ ಹಾವಯ್ಯ ಬಸಯ್ಯ ಎಂಬುವರಿಗೆ ಸೇರಿದ ಎರಡು ಎತ್ತುಗಳು ಸಿಡಿಲಿಗೆ ಸಾವನ್ನಪ್ಪಿವೆ. ಜಿಲ್ಲೆಯ ಚಿಟಗುಪ್ಪ, ಭಾಲ್ಕಿಯಲ್ಲೂ ಮಳೆ ಬಿದ್ದಿದೆ.

ಮಧ್ಯಾಹ್ನ 2ರ ವರೆಗೆ 42 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿತ್ತು. ಮಧ್ಯಾಹ್ನ 2ರ ನಂತರ ಬಿರುಗಾಳಿಯೊಂದಿಗೆ ಜೋರು ಮಳೆ ಸುರಿಯಿತು. ತುಂತುರು ಮಳೆ ಮುಂದುವರೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.