ಗುರುವಾರ , ಆಗಸ್ಟ್ 11, 2022
20 °C

ವಿಶ್ವ ಶಾಂತಿಗಾಗಿ ಕಾರ್ತೀಕ ದೀಪೋತ್ಸವ 13ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ವಿಶ್ವಶಾಂತಿ ಹಾಗೂ ಲೋಕ ಕಲ್ಯಾಣಕ್ಕಾಗಿ ಭಾಲ್ಕಿ ರಸ್ತೆಯ ಸಮೀಪದಲ್ಲಿರುವ ಜ್ಞಾನ ಶಿವಯೋಗಾಶ್ರಮದಲ್ಲಿ ಕಾರ್ತೀಕ ದೀಪೋತ್ಸವ ಡಿ.13ರಂದು ಸಂಜೆ 4 ಗಂಟೆಗೆ ನಡೆಯಲಿದೆ.

ಶ್ರೀಶೈಲದ ಅಕ್ಕಮಹಾದೇವಿ ಚೈತನ್ಯ ಪೀಠದ ಅಧಿಪತಿ ಕರುಣಾದೇವಿ ಮಾತಾ ಸಾನಿಧ್ಯ ವಹಿಸುವರು. ಬೇಮಳಖೇಡ ಹಿರೇಮಠದ ರಾಜಶೇಖರ ಶಿವಾಚಾರ್ಯರು ನೇತೃತ್ವ ವಹಿಸುವರು.

ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಕೋವಿಡ್‌ ನಿಯಮಗಳನ್ನು ಪಾಲಿಸಿ ಸುಖ, ಶಾಂತಿ, ಸಮೃದ್ಧಿಗಾಗಿ ಹಣತೆಗಳನ್ನು ತಂದು ಕಾರ್ತೀಕ ದೀಪಗಳನ್ನು ಬೆಳಗಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಕಾಶೀನಾಥ ಶಂಭು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು