ಗುರುವಾರ , ಮೇ 19, 2022
21 °C
ಬೀದರ್ ತಾಲ್ಲೂಕಿನಲ್ಲಿ ಅತಿಹೆಚ್ಚು ಮತಗಟ್ಟೆಗಳು, 21 ರಂದೇ ಮತ ಎಣಿಕೆ

ಕಸಾಪ ಚುನಾವಣೆ: ಜಿಲ್ಲೆಯಲ್ಲಿ 12,837 ಮತದಾರರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲೆಯಲ್ಲಿ ನವೆಂಬರ್ 21 ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೀದರ್ ತಹಶೀಲ್ದಾರ್ ಮಹಮ್ಮದ್ ಶಕೀಲ್ ತಿಳಿಸಿದ್ದಾರೆ.

ಜಿಲ್ಲೆಯ ಮತದಾನ ಕೇಂದ್ರಗಳಲ್ಲಿ ಅಂದು ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಮದಾನದ ನಂತರ ಆಯಾ ತಾಲ್ಲೂಕುಗಳ ತಹಶೀಲ್ದಾರ್ ಕಚೇರಿಗಳಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಹೇಳಿದ್ದಾರೆ.

ಬೀದರ್ ತಾಲ್ಲೂಕಿನಲ್ಲಿ ಏಳು, ಭಾಲ್ಕಿಯಲ್ಲಿ 2, ಔರಾದ್ ಕಮಲನಗರ, ಚಿಟಗುಪ್ಪ, ಬಸವಕಲ್ಯಾಣ ಹಾಗೂ ಹುಲಸೂರು ತಾಲ್ಲೂಕುಗಳಲ್ಲಿ ತಲಾ ಒಂದು ಮತಗಟ್ಟೆಗಳು ಇವೆ ಎಂದು ತಿಳಿಸಿದ್ದಾರೆ.

ಬೀದರ್‍ನಲ್ಲಿ ತಹಶೀಲ್ದಾರ್ ಕಚೇರಿಯ ಕೋಣೆ ಸಂಖ್ಯೆ 4, ಎಡಿಎಲ್‍ಆರ್ ಕಚೇರಿ ಕೋಣೆ, ತಾಲ್ಲೂಕು ಪಂಚಾಯಿತಿ ಕಚೇರಿ, ತೋಟಗಾರಿಕೆ ಇಲಾಖೆ ಕಚೇರಿ, ವಾಣಿಜ್ಯ ತೆರಿಗೆ ಇಲಾಖೆ ಕಚೇರಿ, ಬಗದಲ್ ನಾಡ ಕಚೇರಿ, ಭಾಲ್ಕಿಯಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ, ಔರಾದ್‍ನಲ್ಲಿ ತಹಶೀಲ್ದಾರ್ ಕಚೇರಿ, ಕಮಲನಗರದಲ್ಲಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಹುಮನಾಬಾದ್‍ನಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣ, ಚಿಟಗುಪ್ಪದಲ್ಲಿ ನಾಡ ಕಚೇರಿ, ಬಸವಕಲ್ಯಾಣದಲ್ಲಿ ತಹಶೀಲ್ದಾರ್ ಕಚೇರಿ, ಹುಲಸೂರಿನಲ್ಲಿ ಹಳೆ ತಹಶೀಲ್ದಾರ್ ಕಚೇರಿಯಲ್ಲಿ ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ 9,654 ಪುರುಷರು ಹಾಗೂ 3,184 ಮಹಿಳೆಯರು ಸೇರಿ ಒಟ್ಟು 12,837 ಮತದಾರರು ಇದ್ದಾರೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಜಿಲ್ಲಾ ಚುನಾವಣೆ ಉಸ್ತುವಾರಿ ಅಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಉಪ ವಿಭಾಗಾಧಿಕಾರಿಗಳಾದ ಗರಿಮಾ ಪನ್ವಾರ್, ಭುವನೇಶ ಪಾಟೀಲ ಚುನಾವಣೆ ಮೇಲ್ವಿಚಾರಕ ಹಾಗೂ ಬೀದರ್ ತಹಶೀಲ್ದಾರ್ ಮಹಮ್ಮದ್ ಶಕೀಲ್ ಚುನಾವಣಾಧಿಕಾರಿಯಾಗಿದ್ದಾರೆ.

ನಾಲ್ವರು ಕಣದಲ್ಲಿ: ಚುನಾವಣೆ ಅಂತಿಮ ಕಣದಲ್ಲಿ ಸುರೇಶ ಚನಶೆಟ್ಟಿ, ರಾಜಕುಮಾರ ಹೆಬ್ಬಾಳೆ, ಸಂಜೀವಕುಮಾರ ಅತಿವಾಳೆ ಹಾಗೂ ಸಿದ್ಧಲಿಂಗಯ್ಯ ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.