ಬೀದರ್: ಇಲ್ಲಿಯ ಹಿರಿಯ ಉದ್ಯಮಿ ಕಾಶಪ್ಪ ಧನ್ನೂರ ಅವರಿಗೆ ಕೂಡಲಸಂಗಮ ಬಸವ ಧರ್ಮ ಪೀಠದಿಂದ ಕೊಡಲಾಗುವ ಪ್ರಸಕ್ತ ಸಾಲಿನ ಕಾಯಕ ರತ್ನ ಪ್ರಶಸ್ತಿ ದೊರೆತಿದೆ.

ಬಸವಾದಿ ಶರಣರ ಕಾಯಕ ಹಾಗೂ ದಾಸೋಹ ತತ್ವವನ್ನು ಪಾಲಿಸಿಕೊಂಡು ಬಂದಿರುವುದನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮೂಲತಃ ಭಾಲ್ಕಿ ತಾಲ್ಲೂಕಿನ ಧನ್ನೂರ(ಎಚ್) ಗ್ರಾಮದವರಾದ ಕಾಶಪ್ಪ ಧನ್ನೂರ, ಸರಳ, ಸಜ್ಜನಿಕೆಗೆ ಹೆಸರಾಗಿದ್ದಾರೆ. ಐದು ದಶಕಗಳಿಂದ ಬಸವ ತತ್ವವನ್ನು ಅನುಸರಿಸಿಕೊಂಡು ಬಂದಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಇದ್ದಾರೆ.

ಗಾಂಧಿಗಂಜ್‌ನ ಪ್ರತಿಷ್ಠಿತ ದಿ. ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಹಾಗೂ ಗಾಂಧಿಗಂಜ್‌ನ ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಪ್ರಶಸ್ತಿ ಪ್ರದಾನ: ಕೂಡಲಸಂಗಮದಲ್ಲಿ ನಡೆದ 33ನೇ ಶರಣ ಮೇಳದಲ್ಲಿ ಬಸವ ಧರ್ಮ ಪೀಠಾಧ್ಯಕ್ಷೆ ಡಾ.ಗಂಗಾದೇವಿ ಅವರು ಕಾಶಪ್ಪ ಧನ್ನೂರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಬಸವ ಧರ್ಮ ಪೀಠದ ಉತ್ತರಾಧಿಕಾರಿ ಮಹಾದೇಶ್ವರ ಸ್ವಾಮೀಜಿ, ಸಿದ್ಧರಾಮೇಶ್ವರ ಸ್ವಾಮೀಜಿ, ಧಾರವಾಡ ಪೀಠದ ಮಾತೆ ಜ್ಞಾನೇಶ್ವರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.