ಭಾನುವಾರ, ಡಿಸೆಂಬರ್ 4, 2022
21 °C

ಬೀದರ್ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕದಡಲು ಯತ್ನ: ಖಂಡ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ‘ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ. ಜನತೆ ತಾಳ್ಮೆಯಿಂದ ಶಾಂತಿ ಕಾಪಾಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ದಸರಾ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೆಲ ಕಿಡಿಗೇಡಿ ಯುವಕರು ಗವಾನ್ ದರ್ಗಾಗೆ ನುಗ್ಗಿ ಕುಂಕುಮ ಹಚ್ಚಿ ಪೂಜೆ ಮಾಡಿ ಘೋಷಣೆ ಕೂಗಿರುವುದು ಸರಿಯಲ್ಲ. ಸರ್ಕಾರ ಈ ರೀತಿಯ ಚಟುವಟಿಕೆಗಳಿಗೆ ಪ್ರತ್ಯಕ್ಷವಾಗಿಯಾಗಲಿ, ಪರೋಕ್ಷವಾಗಿಯಾಗಲಿ ಬೆಂಬಲ ನೀಡುವುದು ಸೂಕ್ತವಲ್ಲ. ಶಾಂತಿ ಕದಡುವ ಪ್ರಯತ್ನ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರದಿಂದ ಇದ್ದು, ಜಿಲ್ಲೆಯಲ್ಲಿ ಶಾಂತಿ ಕದಡದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.