ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧುನಿಕ ಅನುಭವ ಮಂಟಪಕ್ಕೆ ₹50 ಕೋಟಿ ಬಿಡುಗಡೆ: ಈಶ್ವರ ಖಂಡ್ರೆ

Published 8 ಫೆಬ್ರುವರಿ 2024, 15:47 IST
Last Updated 8 ಫೆಬ್ರುವರಿ 2024, 15:47 IST
ಅಕ್ಷರ ಗಾತ್ರ

ಬೆಂಗಳೂರು: ‘ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಆಧುನಿಕ ಅನುಭವ ಮಂಟಪಕ್ಕೆ ರಾಜ್ಯ ಸರ್ಕಾರ ₹ 50 ಕೋಟಿ ಬಿಡುಗಡೆ ಮಾಡಿದೆ’ ಎಂದು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

‘ಆಧುನಿಕ ಅನುಭವ ಮಂಟಪದ ಕಾಮಗಾರಿಯ ಮಾರ್ಚ್‌ವರೆಗಿನ ಬಿಲ್‌ಗಳನ್ನು ಪಾವತಿ ಮಾಡಲು ಮತ್ತು ಕಾಮಗಾರಿಯನ್ನು ಇನ್ನಷ್ಟು ತ್ವರಿತಗೊಳಿಸಲು ಹಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೆ. ಮನವಿಗೆ ಸ್ಪಂದಿಸಿ ತಕ್ಷಣವೇ ಹಣ ಬಿಡುಗಡೆ ಮಾಡಿದ್ದಾರೆ’ ಎಂದರು.

‘ಮುಂದಿನ ಎರಡು ವರ್ಷಗಳಲ್ಲಿ ಭವ್ಯ, ದಿವ್ಯ ಆಧುನಿಕ ಅನುಭವ ಮಂಟಪ ನಿರ್ಮಿಸಿ, ಬಸವಕಲ್ಯಾಣವನ್ನು ಪ್ರಮುಖ ಪ್ರವಾಸಿ ತಾಣವಾಗಿ ಮಾಡುವ ಉದ್ದೇಶವಿದೆ’ ಎಂದು ಖಂಡ್ರೆ ಹೇಳಿದರು.

‘ನಾನು ಹಿಂದೆ (2017) ಪೌರಾಡಳಿತ ಸಚಿವ ಆಗಿದ್ದಾಗ ಆಧುನಿಕ ಅನುಭವ ಮಂಟಪ ನಿರ್ಮಿಸಬೇಕೆಂದು ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೆ. ಅವರು ಒಪ್ಪಿಗೆ ನೀಡಿ ಬಜೆಟ್‌ನಲ್ಲಿ ಪ್ರಕಟಿಸಿದ್ದರು’ ಎಂದು ಖಂಡ್ರೆ ಸ್ಮರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT