ಭಾಲ್ಕಿ (ಬೀದರ್ ಜಿಲ್ಲೆ): ಮಾಜಿ ಸಚಿವ ಭೀಮಣ್ಣ ಖಂಡ್ರೆಯವರ ಅಂತಿಮ ದರ್ಶನಕ್ಕೆ ವಿವಿಧ ಕಡೆಗಳಿಂದ ಜನ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಹಲವು ಕಡೆಗಳಲ್ಲಿ ಶನಿವಾರ ದಾಸೋಹ ವ್ಯವಸ್ಥೆ ಮಾಡಲಾಗಿದೆ.

ಭೀಮಣ್ಣ ಖಂಡ್ರೆಯವರ ನಿವಾಸ, ಮಹಾತ್ಮ ಗಾಂಧಿ ವೃತ್ತ, ಭಾಲ್ಕಿ ಹಿರೇಮಠ ಸಂಸ್ಥಾನ ಸೇರಿದಂತೆ ಇತರೆ ಕಡೆಗಳಲ್ಲಿ ಜನರ ಅನುಕೂಲಕ್ಕಾಗಿ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

‘ಲಿಂಗಾಯತ ಹಾಗೂ ಬಸವ ಪರಂಪರೆಯಲ್ಲಿ ಕಾಯಕ ಮತ್ತು ದಾಸೋಹಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಏನೇ ಕಾರ್ಯಗಳಿದ್ದರೂ ದಾಸೋಹ ನಿರಂತರವಾಗಿ ನಡೆಸುವ ಪದ್ದತಿ ಇದೆ. ಅದರಂತೆ ಹಿರೇಮಠ ಸಂಸ್ಥಾನ ಹಾಗೂ ಪಟ್ಟಣದ ಹಲವು ಕಡೆಗಳಲ್ಲಿ ಭಕ್ತರಿಗಾಗಿ ದಾಸೋಹ ವ್ಯವಸ್ಥೆ ಮಾಡಲಾಗಿದೆ’ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.