ಕಮಲನಗರ: ತಾಲ್ಲೂಕಿನ ಮದನೂರ ಗ್ರಾ.ಪಂ.ವ್ಯಾಪ್ತಿಯಲ್ಲಿ ಬರುವ ಖತಗಾಂವ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಗ್ರಾಮಸ್ಥರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

‘ಗ್ರಾಮ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಆದರೆ ಎಲ್ಲೆಂದರಲ್ಲಿ ಕೊಳಚೆ ನೀರು, ಜನತೆಗೆ ಮೂಲ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಈ ನಡುವೆ ಜನರು ಜೀವನ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಕೊಳಚೆ ಪ್ರದೇಶದಿಂದ ಎಲ್ಲಾ ಕಡೆ ಸೊಳ್ಳೆಗಳ ಕಾಟ ವಿಪರೀತವಾಗಿದೆ. ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಶುರುವಾಗಿದೆ. ಸಂಬಂಧಿತ ಅಧಿಕಾರಿಗಳು ಸೊಳ್ಳೆಗಳನ್ನು ನಿಯಂತ್ರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

‘ಚರಂಡಿಗಳು ಸಂಪೂರ್ಣ ಕಲುಷಿತಗೊಂಡಿವೆ. ಜತೆಗೆ ಮಣ್ಣುಗಳಿಂದ ತುಂಬಿಕೊಂಡು ಕೊಳಚೆ ನೀರು ಸರಾಗವಾಗಿ ಹರಿಯದೇ ನಿಂತಲ್ಲೇ ನಿಂತು ದುರ್ವಾಸನೆ ಬೀರುತ್ತಿದೆ. ಇದರೊಂದಿಗೆ ಸೊಳ್ಳೆಗಳ ತಾಣವಾಗಿ ಮಾರ್ಪಾಡಾಗಿದ್ದು, ಇದರಿಂದ ಹಗಲು ಹೊತ್ತಿನಲ್ಲಿಯೇ ತೊಂದರೆ ಅನುಭವಿಸುವಂತಾಗಿದೆ’ ಎನ್ನುತ್ತಾರೆ ಗ್ರಾಮಸ್ಥರು.

‘ಮಳೆಗಾಲ ಆರಂಭವಾಗಿ ಹಲವು ದಿನ ಕಳೆಯುತ್ತಾ ಬಂದರೂ ಗ್ರಾ.ಪಂ.ಇಲ್ಲಿನ ಚರಂಡಿ ಸ್ವಚ್ಛಗೊಳಿಸುವ ಕೆಲಸಕ್ಕೆ ಮುಂದಾಗಿಲ್ಲ. ಸತತ ಎರಡು ದಿನಗಳಿಂದ ಸುರಿದ ಸಾಧಾರಣ ಮಳೆಗೆ ಗ್ರಾಮಗಳಲ್ಲಿರುವ ಚರಂಡಿಗಳ ಮಲಿನ ನೀರು ರಸ್ತೆ ಮೇಲೆಲ್ಲ ಹರಿದರೂ ಗ್ರಾ.ಪಂ.ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯುತ್ ದೀಪ: ‘ಕಳೆದ ಹಲವು ತಿಂಗಳಿಂದ ಗ್ರಾಮದಲ್ಲಿ ವಿದ್ಯುತ್ ಬೀದಿ ದೀಪಗಳು ಕೆಟ್ಟು ಹೋಗಿವೆ. ಮಳೆಗಾಲವಿದ್ದ ಕಾರಣ ರಸ್ತೆಯಲ್ಲಿ ಹುಳ ಹುಪ್ಪಡಿಗಳು ತಿರುಗಾಡುತ್ತಿವೆ. ಹೀಗಾಗಿ ರಾತ್ರಿ ಹೊತ್ತಲ್ಲಿ ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಪಡುವಂತಾಗಿದೆ. ಹಲವು ಬಾರಿ ಸಂಬಂಧಿತ ಅಧಿಕಾರಿಗಳ, ಚುನಾಯಿತ ಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಗ್ರಾಮಸ್ಥರು ಗ್ರಾ.ಪಂ.ಅವ್ಯವಸ್ಥೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಗ್ರಾಮದಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಗ್ರಾಮದ ಭಗವಾನ ಮೇತ್ರೆ, ನರಸಿಂಗ ಗುಡಮೆ, ಇಸಾಮೋದ್ದೀನ ಬಸೀರಸಾಬ, ಪ್ರೇಮ ಜೊನ್ನೆಕೇರೆ, ಶಿವಕುಮಾರ, ಮತೀನ ಚಾಕೂರೆ, ಪ್ರಮೋದ ಧರಣೆ, ದೇವಿದಾಸ ಚವ್ಹಾಣ, ಸಚಿನ ಧರಣೆ, ಭರತ ಧರಣೆ ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿಯ ಎಲ್ಲಾ ಬಡಾವಣೆಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಸೊಳ್ಳೆಗಳ ನಿಯಂತ್ರಣಕ್ಕೆ ಬ್ಲಿಚಿಂಗ್ ಪೌಡರ್ ಸಿಂಪಡಣೆ ಮಾಡಿ ಫಾಗಿಂಗ್ ಮಾಡಿಸಬೇಕು
-ಸಂಗಮೇಶ ಧರಣೆ ಗ್ರಾಮಸ್ಥ

ಆಗಸ್ಟ್ 15ರೊಳಗಾಗಿ ಗ್ರಾಮದಲ್ಲಿಯ ಎಲ್ಲಾ ವಿದ್ಯುತ್ ಕಂಬಗಳಿಗೆ ದೀಪಗಳನ್ನು ಅಳವಡಿಸಬೇಕು ಹಾಗೂ ಚರಂಡಿಯಲ್ಲಿನ ಹೂಳು ತೆಗೆಸಿ ಗ್ರಾಮದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು
-ಮುಸಾ ಸೈಯ್ಯದ, ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.