ಗುರುವಾರ , ಡಿಸೆಂಬರ್ 1, 2022
20 °C

ವಿದ್ಯಾಭಾರತಿ ಪ್ರಾಂತೀಯ, ಕ್ಷೇತ್ರೀಯ ಖೋ ಖೋ ಪಂದ್ಯಾವಳಿ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಇಲ್ಲಿಯ ಬಿ.ವಿ. ಭೂಮರಡ್ಡಿ ಕಾಲೇಜು ಆವರಣದಲ್ಲಿ ಅಕ್ಟೋಬರ್ 8, 9 ರಂದು ವಿದ್ಯಾಭಾರತಿ ಕರ್ನಾಟಕದ ಪ್ರಾಂತೀಯ ಹಾಗೂ 10 ರಂದು ಕ್ಷೇತ್ರೀಯ ಮಟ್ಟದ ಖೋ ಖೋ ಪಂದ್ಯಾವಳಿ ನಡೆಯಲಿವೆ.

8 ರಂದು ಬೆಳಿಗ್ಗೆ 10ಕ್ಕೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರು ಪ್ರಾಂತೀಯ ಪಂದ್ಯಾವಳಿಯನ್ನು ಉದ್ಘಾಟಿಸುವರು. ತಡೋಳ ಹಾಗೂ ಮೆಹಕರ ಮಠದ ರಾಜೇಶ್ವರ ಶಿವಾಚಾರ್ಯ ಸಾನಿಧ್ಯ ವಹಿಸುವರು.

ಮುಖ್ಯ ಅತಿಥಿಗಳಾಗಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ, ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರಿಯ ಬುನಾದಿ ಶಿಕ್ಷಣ ಪ್ರಮುಖ ಮಹಿಪಾಲ್ ರೆಡ್ಡಿ ಪಾಟೀಲ, ಬಿ.ವಿ.ಬಿ. ಪದವಿ ಕಾಲೇಜು ಪ್ರಾಚಾರ್ಯ ಡಾ. ಪಿ. ವಿಠ್ಠಲರೆಡ್ಡಿ, ನಗರಸಭೆ ಸದಸ್ಯರಾದ ರಾಜಾರಾಮ ಚಿಟ್ಟಾ, ಶಶಿಧರ ಹೊಸಳ್ಳಿ ಭಾಗವಹಿಸುವರು. ವಿದ್ಯಾಭಾರತಿ ಕರ್ನಾಟಕದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಬಿ. ಸಜ್ಜನಶೆಟ್ಟಿ ಅಧ್ಯಕ್ಷತೆ ವಹಿಸುವರು.

9 ರಂದು ಸಂಜೆ 4ಕ್ಕೆ ಪ್ರಾಂತೀಯ ಮಟ್ಟದ ಪಂದ್ಯಾವಳಿಯ ಸಮಾರೋಪ ಹಾಗೂ ಕ್ಷೇತ್ರೀಯ ಮಟ್ಟದ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಮುಖಂಡರಾದ ಜಗದೀಶ್ ಖೂಬಾ, ಅಶ್ವಿನಿ ಸ್ವಾಮಿ, ಅರುಣಕುಮಾರ ಹೋತಪೇಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಆರ್.ಎಸ್.ಎಸ್ ಪ್ರಾಂತ ಶಾರಿರೀಕ ಪ್ರಮುಖ ನಾಗೇಶ ರೆಡ್ಡಿ ಸಮಾರೋಪ ನುಡಿ ಆಡುವರು.

10 ರಂದು ಮಧ್ಯಾಹ್ನ 3ಕ್ಕೆ ಕ್ಷೇತ್ರೀಯ ಮಟ್ಟದ ಪಂದ್ಯಾವಳಿಯ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಸಿ. ವೀರಣ್ಣ, ಬಿಡಿಎ ಅಧ್ಯಕ್ಷ ಬಾಬುವಾಲಿ, ಡಾ. ಸುಭಾಷ್ ಕರ್ಪೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಹಾಗೂ ಚಾರ್ಟೆಡ್ ಅಕೌಂಟಂಟ್ ಕೇದಾರನಾಥ ಬಿ. ಶೆಟಕಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಮೂರು ದಿನಗಳ ಪಂದ್ಯಾವಳಿಯ ಅಚ್ಚುಕಟ್ಟು ಆಯೋಜನೆಗೆ 54 ದೈಹಿಕ ಶಿಕ್ಷಣ ಶಿಕ್ಷಕರನ್ನು ಒಳಗೊಂಡ ಎಂಟು ಸಮಿತಿಗಳನ್ನು ರಚಿಸಲಾಗಿದೆ. ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿದ್ಯಾಭಾರತಿ ಕರ್ನಾಟಕದ ಜಿಲ್ಲಾ ಘಟಕದ ಕಾರ್ಯದರ್ಶಿ ಭಗುಸಿಂಗ್ ಜಾಧವ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.