ಮಾರಕಾಸ್ತ್ರದಿಂದ ಹೊಡೆದು ವೃದ್ಧೆ ಕೊಲೆ
ಜನವಾಡ: ಬೀದರ್ ತಾಲ್ಲೂಕಿನ ಅತಿವಾಳ ಕ್ರಾಸ್ ಸಮೀಪದ ಬೀದರ್-ಭಾಲ್ಕಿ ಮುಖ್ಯ ರಸ್ತೆಯ ಬದಿಯಲ್ಲಿ ವೃದ್ಧ ಮಹಿಳೆಯೊಬ್ಬರನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಲಾಗಿದೆ.
ಸದ್ಯ ಬೀದರ್‌ನ ಶೆಟಕಾರ್ ಗಲ್ಲಿಯಲ್ಲಿ ವಾಸವಾಗಿದ್ದ ಹೊನ್ನಿಕೇರಿ ಗಾಮದ ಕಮಲಾಬಾಯಿ ಮಲಶೆಟ್ಟಿ ಶೆಟಕಾರ್(70) ಕೊಲೆಯಾದವರು.
ಕಮಲಾಬಾಯಿ ಅವರು ತನ್ನ ಜಮೀನಿನ ಸರ್ವೇ ಮಾಡಿಸಿಕೊಳ್ಳಲು ಬಂದಿದ್ದ ವೇಳೆ ಘಟನೆ ನಡೆದಿದೆ. ಅವರ ಸಂಬಂಧಿಕರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್, ಡಿವೈಎಸ್‍ಪಿ ಬಸವೇಶ್ವರ ಹೀರಾ, ಬೀದರ್ ಗ್ರಾಮೀಣ ಸಿಪಿಐ ಶ್ರೀಕಾಂತ ಅಲ್ಲಾಪುರ, ಜನವಾಡ ಪಿಎಸ್‍ಐ ಶಿವರಾಜ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.