ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆಗಳ ಲಾಭಕ್ಕೆ ಅಕ್ಷರ ಜ್ಞಾನ ಅಗತ್ಯ: ಜಿಲ್ಲಾಧಿಕಾರಿ ರಾಮಚಂದ್ರನ್

Last Updated 30 ಸೆಪ್ಟೆಂಬರ್ 2020, 17:14 IST
ಅಕ್ಷರ ಗಾತ್ರ

ಬೀದರ್: ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಅಕ್ಷರ ಜ್ಞಾನ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದರು.

ಜಿಲ್ಲಾ ಪಂಚಾಯಿತಿ, ಜಿಲ್ಲಾ ಲೋಕ ಶಿಕ್ಷಣ ಸಮಿತಿ, ತಾಲ್ಲೂಕು ಲೋಕ ಶಿಕ್ಷಣ ಸಮಿತಿ, ಕರ್ನಾಟಕ ಸಾಹಿತ್ಯ ಸಂಘದ ಸಹಯೋಗದಲ್ಲಿ ನಗರದ ಕರ್ನಾಟಕ ಸಾಹಿತ್ಯ ಸಂಘದ ಕಚೇರಿಯಲ್ಲಿ ನಡೆದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಇರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡುವ ಹೊಣೆ ಇಡೀ ಸಮಾಜದ್ದಾಗಿದೆ ಎಂದು ಹೇಳಿದರು.

ಸಾಕ್ಷರತಾ ಯೋಜನೆ ಫಲವಾಗಿ ಗ್ರಾಮೀಣ ಭಾಗದಲ್ಲಿ ಬಹಳಷ್ಟು ಮಂದಿ ಅನಕ್ಷರಸ್ಥರು ಅಕ್ಷರ ಜ್ಞಾನ ಪಡೆದಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ, ಕರ್ನಾಟಕ ಕಾಲೇಜು ಪ್ರಾಚಾರ್ಯ ಜಗನ್ನಾಥ ಹೆಬ್ಬಾಳೆ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸಂಜೀವಕುಮಾರ ಜುಮ್ಮಾ, ನಗರಸಭೆ ಎಇಇ ರಾಜಶೇಖರ ಮಠ, ಜಿಲ್ಲಾ ಲೋಕ ಶಿಕ್ಷಣ ಸಮಿತಿ ಕಾರ್ಯಕ್ರಮ ಸಹಾಯಕ ವೆಂಕಟ ಭಾಗ್ಯನಗರ, ತಾಲ್ಲೂಕು ಕಾರ್ಯಕ್ರಮ ಸಂಯೋಜಕ ಶಿವರಾಜ ಮಲ್ಕಾಪುರೆ, ರಾಜಕುಮಾರ ಹೆಬ್ಬಾಳೆ, ನಿಜಲಿಂಗಪ್ಪ ತಗಾರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT