ಶುಕ್ರವಾರ, ಆಗಸ್ಟ್ 12, 2022
23 °C

ಬೀದರ್‌: ಅಸಂಘಟಿತ ಕಾರ್ಮಿಕರಿಗೆ ಪರಿಹಾರಧನ ತಿಳಿವಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಕೋವಿಡ್ ಪರಿಹಾರ ಧನದ ಬಗ್ಗೆ ಮಾಹಿತಿ ನೀಡಲಾಯಿತು.

ಕೆಎಸ್ಐಐಡಿಸಿ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ‘ರಾಜ್ಯ ಸರ್ಕಾರವು ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಎಲ್ಲ ಕಾರ್ಮಿಕರಿಗೆ ನೇರವು ನೀಡುತ್ತಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಪ್ರತಿಯೊಬ್ಬ ಕಾರ್ಮಿಕರಿಗೆ ಈ ಸಹಾಯಧನ ದೊರಕುವಂತಾಗಲು ಕಾರ್ಮಿಕರಿಗೆ ಯೋಜನೆಯ ಮಾಹಿತಿ ನೀಡಬೇಕು’ ಎಂದರು.

ಎಪಿಎಂಸಿ ಅಧ್ಯಕ್ಷ ವಿಜಯಕುಮಾರ ಆನಂದೆ, ಉಪಾಧ್ಯಕ್ಷ ಬಸವರಾಜ ಶರ್ಮಾ, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶಕುಮಾರ, ಬೀದರ್ ದಕ್ಷಿಣ ಮಂಡಲ ಅಧ್ಯಕ್ಷ ರಾಜರೆಡ್ಡಿ ಶಹಾಬಾದ್, ಜಗನ್ನಾಥ ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು