ಬೀದರ್: ‘ಮೂರ್ತಿ ಸ್ಥಾಪನೆ ಬಗ್ಗೆ ಔರಾದ್ ತಾಲ್ಲೂಕಿನ ಕೌಡಗಾಂವ್ ಗ್ರಾಮದಲ್ಲಿ ವಿವಾದ ತಲೆದೋರಿದ್ದು, ಶಾಂತಿ ನೆಲೆಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ವಿವಿಧ ಲಿಂಗಾಯತ, ಬಸವಪರ ಸಂಘಟನೆಗಳ ಪ್ರಮುಖರು ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರಿಗೆ ಸಂಘಟನೆಗಳ ಪ್ರಮುಖರು ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು.

ಕೌಡಗಾಂವ್ನಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರ ಮೂರ್ತಿ ಸ್ಥಾಪನೆಗೆ ಯಾವುದೇ ಅಭ್ಯಂತರ ಇಲ್ಲ. ಅಭ್ಯಂತರ ಇರುವುದು ಮೂರ್ತಿ ಸ್ಥಾಪನೆ ಸ್ಥಳದ ಬಗ್ಗೆ. ಗ್ರಾಮದ ನಡು ರಸ್ತೆಯಲ್ಲಿ ಮೂರ್ತಿ ಕೂರಿಸುವುದರಿಂದ ವಾಹನಗಳ ಓಡಾಟಕ್ಕೆ ತೊಂದರೆಯಾಗಲಿದೆ. ಅಪಘಾತಗಳಿಗೆ ಕಾರಣವಾಗಲಿದೆ. ರಸ್ತೆ ಬದಿಯಲ್ಲಿ ಮೂರ್ತಿ ಕೂರಿಸಿದರೆ ಯಾರಿಗೂ ತೊಂದರೆ ಆಗುವುದಿಲ್ಲ. ಮಹಾ ಪುರುಷರ ಮೂರ್ತಿಗಳಿಗೂ ಧಕ್ಕೆ ಆಗುವುದಿಲ್ಲ ಎಂದು ತಿಳಿಸಿದರು.

ತಾಲ್ಲೂಕಿನ ಅಧಿಕಾರಿಗಳು ಸಂತಪುರದಲ್ಲಿ ಇತ್ತೀಚೆಗೆ ನಡೆಸಿದ ಎಲ್ಲ ಸಮುದಾಯಗಳ ಮುಖಂಡರ ಸಭೆಯಲ್ಲಿ ರಸ್ತೆಯ ಒಂದು ಬದಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಇನ್ನೊಂದು ಬದಿಯಲ್ಲಿ ಬಸವೇಶ್ವರರ ಮೂರ್ತಿ ಕೂರಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಅದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದರು. ಈಗ ಕೆಲವರ ಕುಮ್ಮಕ್ಕಿನಿಂದ ವಿವಾದ ಉಂಟಾಗಿದೆ. ದಕ್ಷ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಮೇಲೆ ಆರೋಪ ಹೊರಿಸಿ, ಅವರ ವರ್ಗಾವಣೆಗೆ ಪ್ರತಿಭಟನೆ ನಡೆಸುತ್ತಿರುವುದು ದುರದೃಷ್ಟಕರ ಎಂದು ಹೇಳಿದರು.

ಅಧಿಕಾರಿಗಳು ಯಾವುದೇ ಜಾತಿಗೆ ಸೀಮಿತರಾಗಿರುವುದಿಲ್ಲ. ಜಾತಿ ಹೆಸರಿನಲ್ಲಿ ವರ್ಗಾವಣೆ ಮಾಡುತ್ತ ಹೋದರೆ ಮತ್ತೊಂದು ಎಡವಟ್ಟಿಗೆ ಕಾರಣವಾಗಲಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆ ಬೀದರ್ನಿಂದ ಔರಾದ್ವರೆಗಿನ ರಸ್ತೆಯಲ್ಲಿನ ಎಲ್ಲ ಮಹಾ ಪುರುಷರ ಮೂರ್ತಿಗಳನ್ನು ಸರ್ಕಾರವೇ ತೆರವುಗೊಳಿಸಿದೆ. ಇದರಲ್ಲಿ ಯಾರದ್ದೇ ಕೈವಾಡ ಇಲ್ಲ ಎಂದು ತಿಳಿಸಿದರು.

ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ, ಜಿಲ್ಲಾ ಲಿಂಗಾಯತ ಸಮಾಜದ ಅಧ್ಯಕ್ಷ ಕುಶಾಲ ಪಾಟೀಲ ಖಾಜಾಪುರ, ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ, ಮುಖಂಡರಾದ ದತ್ತು ಪಾಟೀಲ, ಆನಂದ ದೇವಪ್ಪ, ಮಹಾದೇವ ತರನಳ್ಳಿ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.