ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಇಂದು ಜಿಲ್ಲೆಗೆ

Last Updated 23 ನವೆಂಬರ್ 2020, 19:30 IST
ಅಕ್ಷರ ಗಾತ್ರ

ಬೀದರ್: ಕೆಪಿಸಿಸಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ ಅವರು ಮಂಗಳವಾರ (ನ.24) ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ.

ಕಲಬುರ್ಗಿಯಿಂದ ಮಧ್ಯಾಹ್ನ 12.30ಕ್ಕೆ ಬಸವಕಲ್ಯಾಣಕ್ಕೆ ಬರುವರು. ಮಾಜಿ ಶಾಸಕ ದಿ. ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳಕ್ಕೆ ತೆರಳಿ ಪುಷ್ಪನಮನ ಸಲ್ಲಿಸುವರು. ನಂತರ ಎಂ.ಎ. ಬೇಗ್ ಫಂಕ್ಷನ್ ಹಾಲ್‍ನಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿರುವ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು. ಬಳಿಕ ಅನುಭವ ಮಂಟಪ, ರಾಜ್‍ಶಾ ಪೀರ್ ದರ್ಗಾ, ಬಸವೇಶ್ವರ ದೇವಸ್ಥಾನ, ಶಿವಾಜಿ ಪಾರ್ಕ್‍ಗೆ ಭೇಟಿ ಕೊಡುವರು ಎಂದು ಹೇಳಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರೊಂದಿಗೆ ಪ್ರಮುಖ ಮಾರ್ಗಗಳ ಮಧ್ಯದಲ್ಲಿ ಇರುವ ಮಹಾ ಪುರುಷರ ಮೂರ್ತಿಗಳಿಗೆ ಮಾಲಾರ್ಪಣೆ ಮಾಡಿ ಗೌರವಿಸುವರು ಎಂದು ತಿಳಿಸಿದ್ದಾರೆ.

ಸಂಜೆ 4ಕ್ಕೆ ಬಸವಕಲ್ಯಾಣದಿಂದ ಬೀದರ್‌ಗೆ. ಸಂಜೆ 5.30ಕ್ಕೆ ಬೀದರ್‌ನ ಎ.ಕೆ. ಕಾಂಟಿನೆಂಟಲ್‍ನಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಿಲ್ಲಾ ಘಟಕ, ಮುಂಚೂಣಿ ಘಟಕಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುವರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ್, ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಡಾ. ಚಂದ್ರಶೇಖರ ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ ಸಭೆಯಲ್ಲಿ ಭಾಗವಹಿಸುವರು ಎಂದು ಹೇಳಿದ್ದಾರೆ.

ಪಕ್ಷದ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಘಟಕ, ಮುಂಚೂಣಿ ಘಟಕಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT