‘ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ’

ಚಿಟಗುಪ್ಪ: ‘ಕ್ಷತ್ರಿಯ ಸಮಾಜದವರು ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸಲು ಶಿಕ್ಷಣಕ್ಕೆ ಮಹತ್ವ ನೀಡಬೇಕು’ ಎಂದು ಅಖಿಲ ಭಾರತೀಯ ಭಾವಸಾರ ಕ್ಷತ್ರಿಯ ಸಮಾಜದ ರಾಷ್ಟ್ರೀಯ ಘಟಕದ ಅಧ್ಯಕ್ಷ ಸುಧೀರ್ ನಾವಲೆ ಸಲಹೆ ನೀಡಿದರು.
ಇಲ್ಲಿಯ ಭವಾನಿ ದೇಗುಲಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದು ಮಾತನಾಡಿ,‘ಶಿಕ್ಷಣದಿಂದ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಹೀಗಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಸಮಾಜವನ್ನು ಪ್ರಗತಿಯತ್ತ ಕೊಂಡೊಯ್ಯಬೇಕು’ ಎಂದರು.
ಕ್ಷತ್ರಿಯ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ದಂತಕಾಳೆ, ಉತ್ತಮರಾವ್ ಧುಮಾಳೆ, ರಾಮರಾವ್ ಮಹೇಂದ್ರಕರ್, ಅಶೋಕರಾವ್ ಘಂಟೋಜಿ, ಅಶೋಕರಾವ್ ಹಿರಾಸ್ಕರ್, ಸಂಜೀವ ರಂಗದಾಳ್, ಭೂಷಣರಾವ್ ರಂಗದಾಳ್ ಹಾಗೂ ಶುಭಂ ರಂಗದಾಳ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.