ಬೀದರ್: ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಸೆಪ್ಟೆಂಬರ್ 26 ರಂದು ಬೆಳಿಗ್ಗೆ 9ಕ್ಕೆ ಔರಾದ್ ತಾಲ್ಲೂಕಿನ ಸಂಗಮ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.
ಗ್ರಾಮದ ಐತಿಹಾಸಿಕ ಸಂಗಮೇಶ್ವರ ದೇಗುಲಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಲಿದ್ದಾರೆ ಎಂದು ಯುವ ಮುಖಂಡ ಶಶಿಕುಮಾರ ಪಾಟೀಲ ಸಂಗಮ ತಿಳಿಸಿದ್ದಾರೆ.

ನಾಳೆ ಬೀದರ್ ಬಂದ್

ಬೀದರ್: ಕೇಂದ್ರ ಸರ್ಕಾರದ ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿ ಸೆ. 27 ರಂದು ಬೀದರ್ ಬಂದ್ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ತಿಳಿಸಿದ್ದಾರೆ.
ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತರು ನವದೆಹಲಿಯಲ್ಲಿ 10 ತಿಂಗಳಿಂದ ಧರಣಿ ನಡೆಸುತ್ತಿದ್ದರೂ, ಕ್ರಮ ಕೈಗೊಳ್ಳದ ಕಾರಣ ಸೋಮವಾರ ಭಾರತ ಬಂದ್‍ಗೆ ಕರೆ ನೀಡಲಾಗಿದೆ. ಹಾಗೆಯೇ ಅಂದು ರೈತ ಪರ, ಕನ್ನಡ ಪರ ಹಾಗೂ ದಲಿತ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಬೀದರ್ ಬಂದ್‍ಗೆ ಕರೆ ಕೊಡಲಾಗಿದೆ ಎಂದು ಹೇಳಿದ್ದಾರೆ.

ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ 2ಕ್ಕೆ

ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆ ಅಕ್ಟೋಬರ್ 2 ರಂದು ಮಧ್ಯಾಹ್ನ 12.30ಕ್ಕೆ ಇಲ್ಲಿಯ ಉದಗಿರ ರಸ್ತೆಯಲ್ಲಿ ಇರುವ ಆದಿತ್ಯ ಹೊಟೇಲ್ ಸಭಾಂಗಣದಲ್ಲಿ ನಡೆಯಲಿದೆ.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕಕುಮಾರ ಕರಂಜಿ ಅಧ್ಯಕ್ಷತೆ ವಹಿಸುವರು. ಸರ್ವ ಸದಸ್ಯರು ಭಾಗವಹಿಸಬೇಕು ಎಂದು ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನಾಗಶೆಟ್ಟಿ ಧರಂಪೂರ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.