ಬೀದರ್: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಎನ್‌ಇಕೆಆರ್‌ಟಿಸಿ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಮುಕ್ತ ಅವಕಾಶ ಕಲ್ಪಿಸಿದ್ದರಿಂದ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಗಳಲ್ಲಿ ಖಾಸಗಿ ವಾಹನಗಳೇ ತುಂಬಿಕೊಂಡಿದ್ದವು.

ಬೀದರ್, ಉದಗಿರ, ಜಹೀರಾಬಾದ್ ಹಾಗೂ ಹೈದರಾಬಾದ್ ಮಧ್ಯೆ ತೆಲಂಗಾಣದ ಸಾರಿಗೆ ಬಸ್‌ಗಳೇ ಅಧಿಕ ಸಂಖ್ಯೆಯಲ್ಲಿ ಸಂಚರಿಸಿದವು. ಮಹಾರಾಷ್ಟ್ರ ಸಾರಿಗೆ ಬಸ್‌ಗಳು ಬಸವಕಲ್ಯಾಣ, ಕಮಲನಗರ, ಔರಾದ್ ಹಾಗೂ ಹುಮನಾಬಾದ್ ವರೆಗೂ ಬಂದು ಹೋದವು.

ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಸ್ ನಿಲ್ದಾಣಗಳಲ್ಲಿ ಯಾವ ಮಾರ್ಗಗಳಲ್ಲಿ ಬಸ್ ಸಂಚರಿಸುತ್ತವೆಯೋ ಅದೇ ಪ್ಲಾಟ್ ಫಾರ್ಮ್‌ಗಳಲ್ಲಿ ಕ್ರೂಸರ್‌ಗಳನ್ನು ನಿಲುಗಡೆ ಮಾಡಲಾಗಿತ್ತು. ಬಸ್ ನಿಲ್ದಾಣಗಳಲ್ಲಿನ ಮಾರಾಟ ಮಳಿಗೆಗಳು ತೆರೆದುಕೊಂಡಿದ್ದವು.

‘ಬೀದರ್ ವಿಭಾಗದಲ್ಲಿರುವ 14 ಮಂದಿ ಟ್ರೈನಿ ನೌಕರರ ಪೈಕಿ ಐವರು ಶನಿವಾರ ಕರ್ತವ್ಯದ ಮೇಲೆ ಹಾಜರಾಗಿದ್ದಾರೆ. 20 ಬಸ್‌ಗಳು ಹೈದರಾಬಾದ್ ಸೇರಿದಂತೆ ದೂರದ ಪಟ್ಟಣಗಳಿಗೆ ಹೋಗಿ ಬಂದಿವೆ. ಸಾರಿಗೆ ನೌಕರರು ನಿಧಾನವಾಗಿ ಕೆಲಸಕ್ಕೆ ಬರುತ್ತಿದ್ದಾರೆ. ಎರಡು, ಮೂರು ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ’ ಎಂದು ಎನ್‌ಇಕೆಆರ್‌ಟಿಸಿ ಬೀದರ್ ವಿಭಾಗೀಯ ಸಂಚಾಲಕ ಚಂದ್ರಕಾಂತ ಫುಲೇಕರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.