ಮಂಗಳವಾರ, ಮಾರ್ಚ್ 28, 2023
30 °C
ಪಶು ಪಾಲನೆ ಸಹಾಯಕ ನಿರ್ದೇಶಕ ಕಚೇರಿ

ಶಾಸಕರಿಂದ ಭೂಮಿ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ನಗರದ ಜನವಾಡ ರಸ್ತೆಯಲ್ಲಿ ಇರುವ ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಕಚೇರಿ ಆವರಣದಲ್ಲಿ ಸಹಾಯಕ ನಿರ್ದೇಶಕ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಾಸಕ ರಹೀಂಖಾನ್ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.

ಕೇಂದ್ರ ಸರ್ಕಾರದ ಆರ್‍ಐಡಿಎಫ್ ಯೋಜನೆಯ ಅನುದಾನದಲ್ಲಿ ಕಚೇರಿ ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರಿನ ನ್ಯಾಷನಲ್ ಪ್ರೊಜೆಕ್ಟ್ ಕನ್‍ಸ್ಟ್ರಕ್ಷನ್ ಕಾರ್ಪೋರೇಷನ್‍ಗೆ ನಿರ್ಮಾಣ ಹೊಣೆ ವಹಿಸಲಾಗಿದೆ ಎಂದು ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ. ಮಲ್ಲಿಕಾರ್ಜುನ ಹಂಚನಾಳ ತಿಳಿಸಿದರು.

ಇಲಾಖೆಯ ಸಹಾಯಕ ನಿರ್ದೇಶಕ ಡಾ. ರವೀಂದ್ರಕುಮಾರ ಭೂರೆ, ಆಡಳಿತ ಸಹಾಯಕ ನಿರ್ದೇಶಕ ಡಾ. ಗೌತಮ ಅರಳಿ, ಡಾ. ಯೋಗೇಂದ್ರ ಕುಲಕರ್ಣಿ, ಡಾ. ಬಸವರಾಜ ನಿಟ್ಟೂರೆ, ಸಿದ್ದಪ್ಪ ಪಾಟೀಲ, ಬಿ.ಎಸ್. ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.