ಶುಕ್ರವಾರ, ನವೆಂಬರ್ 15, 2019
26 °C

‘ಅಪ್ರತಿಮ ಲೇಖಕ ಲಂಕೇಶ್’

Published:
Updated:
Prajavani

ಭಾಲ್ಕಿ: ಬರವಣಿಗೆ ಮೂಲಕ ಹೊಸ ಮನ್ವಂತರ ಸೃಷ್ಟಿಸಿದ ಪಿ.ಲಂಕೇಶ್ ನಾಡು ಕಂಡ ಅಪ್ರತಿಮ ಲೇಖಕ ಎಂದು ಶಿವಾಜಿ ಕಾಲೇಜಿನ ಪ್ರಾಚಾರ್ಯ ಚಂದ್ರಕಾಂತ ಬಿರಾದಾರ ಹೇಳಿದರು.

ಪಟ್ಟಣದ ಖಡಕೇಶ್ವರ ಪ್ರೌಢಶಾಲೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಶುಕ್ರವಾರ ಆಯೋಜಿಸಿದ್ದ ಶಾಲೆಗೊಂದು ಸಾಹಿತ್ಯ ಸೌರಭ ಕಾರ್ಯಕ್ರಮ ಉದ್ಘಾಟಿಸಿ, ಪತ್ರಕರ್ತ ಪಿ.ಲಂಕೇಶ್ ಅವರ ಬದುಕು ಬರಹ ಕುರಿತು ಮಾತನಾಡಿದರು.

ಲಂಕೇಶ್ ಅವರದ್ದು ಬಹುಮುಖ ಪ್ರತಿಭೆ.  ಶಿಕ್ಷಕನಾಗಿ, ಚಲನಚಿತ್ರ ನಿರ್ದೇಶಕನಾಗಿ, ನಾಟಕಕಾರ, ಕವಿ, ಲೇಖಕ, ಕತೆಗಾರ, ಕಾದಂಬರಿಕಾರ, ಸಾಮಾಜಿಕ ಹೋರಾಟಗಾರ, ರಾಜಕಾರಣಿ ಹಾಗೂ ಪತ್ರಿಕೋದ್ಯಮಿಯಾಗಿ ಅವರು ಉನ್ನತ ಸಾಧನೆ ಮಾಡಿದ್ದಾರೆ ಎಂದರು.

ಖಡಕೇಶ್ವರ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಸುಧಾಕರ ದೇಶಪಾಂಡೆ ಮಾತನಾಡಿ, ಶಾಲಾ ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸುವ ಕಾರ್ಯ ಕಸಾಪ ಮಾಡುತ್ತಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

ಆನಂದ ಕಲ್ಯಾಣೆ ಮಾತನಾಡಿ ದರು. ತಾಲ್ಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ ಮಾತನಾಡಿದರು. ಕಸಾಪ ನಗರ ಘಟಕದ ಅಧ್ಯಕ್ಷ ಸಂತೋಷ ಬಿ.ಜಿ. ಪಾಟೀಲ, ಗೌರವ ಕಾರ್ಯದರ್ಶಿ ಜೀವನ ಬೇದ್ರೆ, ಮಹಿಳಾ ಘಟಕದ ಅಧ್ಯಕ್ಷೆ ಅರ್ಚನಾ ಪವಾರ್, ನಿಟ್ಟೂರು (ಬಿ) ವಲಯ ಅಧ್ಯಕ್ಷ ಸಂಗಮೇಶ ಗುಮ್ಮೆ ಇದ್ದರು.

ಪ್ರತಿಕ್ರಿಯಿಸಿ (+)