ಸೋಮವಾರ, ಫೆಬ್ರವರಿ 24, 2020
19 °C

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ನೌಬಾದ್‌ ಸರ್ಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದಲ್ಲಿ ಬಿಎಸ್ಸಿ, ಬಿಕಾಂ ಹಾಗೂ ಬಿಎ ಪ್ರಥಮ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸೋಮವಾರ ಶಾಸಕ ರಹೀಂ ಖಾನ್ ಲ್ಯಾಪಟಾಪ್‌ ವಿತರಿಸಿದರು.

ನಂತರ ಮಾತನಾಡಿದ ಅವರು,‘ ದೇಶವು ತಂತ್ರಜ್ಞಾನದಲ್ಲಿ ಸಾಕಷ್ಟು ಪ್ರಗತಿ ಸಾಧಿಸುತ್ತಿದೆ. ಆ ದಿಸೆಯಲ್ಲಿ ಸರ್ಕಾರವು ಉಚಿತ ಲಾಪ್‍ಟಾಪ್‍ಗಳನ್ನು ವಿತರಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು’ ಎಂದು ತಿಳಿಸಿದರು.

ಪ್ರಾಚಾರ್ಯ ಭಕಾಳೆ ಮನೋಹರ, ಉಪನ್ಯಾಸಕರಾದ ಡಾ.ಗಿರಿಜಾ ಮಂಗಳಗಟ್ಟಿ, ಪ್ರೊ.ದಿಲೀಪ ಗಡ್ಡೆ, ಡಾ.ಜಯಶ್ರೀ ಪ್ರಭಾ, ಧನರಾಜ ಬಿರಾದಾರ, ಶ್ರೀಕಾಂತ ಬಿರಾದಾರ್, ಪ್ರೊ.ಸಿಂಗೋಡೆ ಅಮರನಾಥ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)