ಮಹಿಳಾ ಶೋಷಣೆ ತಡೆ ಕಾನೂನಿನಲ್ಲಿ ಇನ್ನಷ್ಟು ಸುಧಾರಣೆ ತರುವ ಅಗತ್ಯವಿದೆ ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಅಭಿಪ್ರಾಯಪಟ್ಟರು.
ಇಲ್ಲಿಯ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಸಭಾಂಗಣದಲ್ಲಿ ಅಕ್ಕ ಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘ, ಡಾ. ಎಸ್.ಎಸ್. ಸಿದ್ದಾರೆಡ್ಡಿ ಫೌಂಡೇಷನ್ ಹಾಗೂ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಶೋಷಣೆ ಶೂನ್ಯವಾದಲ್ಲಿ ಭಾರತ ವಿಶ್ವ ಗುರುವಿನ ಸ್ಥಾನದಲ್ಲಿ ಗುರುತಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ. ಮೂಲಿಮನಿ, ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಉಪಾಧ್ಯಕ್ಷೆ ರೇಷ್ಮಾ ಕೌರ್, ಸುವರ್ಣಾ ಚಿಮಕೋಡೆ, ಡಾ. ಪಲ್ಲವಿ ಕೇಸರಿ, ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಮಾತನಾಡಿದರು.
ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸಾವಿತ್ರಿಬಾಯಿ ಹೆಬ್ಬಾಳೆ ಅಧ್ಯಕ್ಷತೆ ವಹಿಸಿದ್ದರು. ಪುಣ್ಯವತಿ ವಿಸಾಜಿ, ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಗಡ್ಡೆ, ಚಂದ್ರಶೇಖರ ಹೆಬ್ಬಾಳೆ, ವೀರಶೆಟ್ಟಿ ಮಣಗೆ, ವೈಜಿನಾಥ ಕಮಠಾಣೆ, ರಾಮಕೃಷ್ಣ ಸಾಳೆ, ರಾಜಕುಮಾರ ಹೆಬ್ಬಾಳೆ, ನಿಜಲಿಂಗಪ್ಪ ತಗಾರೆ ಇದ್ದರು.
ಮಲ್ಲಮ್ಮ ಸಂತಾಜಿ ಸ್ವಾಗತಿಸಿದರು. ಸುನಿತಾ ಕೂಡ್ಲಿಕರ್ ನಿರೂಪಿಸಿದರು. ಸವಿತಾ ಸಾಕುಳೆ ವಂದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.