ಬೀದರ್: ‘ಭ್ರಷ್ಟಾಚಾರದಲ್ಲಿ ಶಾಮಿಲಾಗಿರುವ ಹಿಂದಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರ್ಸಿಗಿ ಹಾಗೂ ರವೀಂದ್ರ ರತ್ನಾಕರ್ ವಿರುದ್ಧ ತನಿಖಾ ತಂಡವು ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದರೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಇಬ್ಬರನ್ನು ರಕ್ಷಿಸುತ್ತಿದ್ದಾರೆ’ ಎಂದು ವಿಶ್ವ ಕ್ರಾಂತಿ ದಿವ್ಯ ಪೀಠದ ಅಧ್ಯಕ್ಷರೂ ಆದ ಸಾಮಾಜಿಕ ಹೋರಾಟಗಾರ ಓಂಪ್ರಕಾಶ ರೊಟ್ಟೆ ಆರೋಪಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಭ್ರಷ್ಟಾಚಾರ, ನೇಮಕಾತಿ ಅವ್ಯವಹಾರ, ಕಳಪೆ ಮಟ್ಟದ ಅಹಾರ ಧಾನ್ಯ ವಿತರಣೆ ಸೇರಿದಂತೆ ಇತರೆ ಅಕ್ರಮಗಳ ವಿರುದ್ಧ ಹೋರಾಟ ಮಾಡಿದ ಫಲವಾಗಿ ತನಿಖಾ ತಂಡವು ತಿಪ್ಪಣ್ಣ ಸಿರ್ಸಿಗಿ ಹಾಗೂ ರವೀಂದ್ರ ರತ್ನಾಕರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದೆ. ಆದರೆ, ಅವರಿಬ್ಬರಿಗೂ ಲಕ್ಷ್ಮೀ ಹೆಬ್ಬಾಳಕರ ಭ್ರಷ್ಟಾಚಾರ ಎಸಗಲು ರಾಜಾಶ್ರಯ ನೀಡುತ್ತಿದ್ದಾರೆ ಎಂದು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದರು.

ತಿಪ್ಪಣ್ಣ ಸಿರ್ಸಿಗಿ ಮತ್ತು ರವೀಂದ್ರ ರತ್ನಾಕರ್ ಅವರು ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಅವರ ಕರ್ತವ್ಯಲೋಪದ ಕುರಿತು ಜಿಲ್ಲಾ ಅಭಿವೃದ್ಧಿ ಸಮನ್ವಯ ಸಮಿತಿಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ತನಿಖೆಗೆ ಆದೇಶಿಸಿದ್ದರು. ತನಿಖಾ ತಂಡ ತನಿಖೆ ನಡೆಸಿ, ಕ್ರಮಕ್ಕೆ ಶಿಫಾರಸು ಮಾಡಿದೆ. ಈ ಸಂಬಂಧ ಸ್ವತಃ ನಾನೇ ಬೆಳಗಾವಿಯಲ್ಲಿ ಜೂನ್ 21ರಂದು ಪತ್ರಿಕಾಗೋಷ್ಠಿ ನಡೆಸಿ, ಕ್ರಮಕ್ಕೆ ಸಚಿವರಿಗೆ ಒತ್ತಾಯಿಸಿದ್ದೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಭ್ರಷ್ಟರ ರಕ್ಷಣೆಗೆ ನಿಂತಿರುವ ಅವರು ಬೀದರ್ ಜಿಲ್ಲೆಗೆ ಬಂದು ಅಧಿಕಾರಿಗಳಿಗೆ ಯಾವ ಸಂದೇಶ ನೀಡಲು ಹೊರಟಿದ್ದಾರೆ ಗೊತ್ತಾಗುತ್ತಿಲ್ಲ ಎಂದರು.

ಈ ವಿಷಯವಾಗಿ ಅಂದಿನ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಹಾಗೂ ಹಾಲಿ ಹುಮನಾಬಾದ್ ಶಾಸಕ ಡಾ.ಸಿದ್ಧಲಿಂಗಪ್ಪ ಪಾಟೀಲ ಅವರು ವಿಧಾನ ಸೌಧದಲ್ಲಿ ಸಚಿವರನ್ನು ಪ್ರಶ್ನಿಸಿದ್ದರು. ಅದಕ್ಕೆ ಲಕ್ಷ್ಮೀ ಹೆಬ್ಬಾಳಕರ ಅವರು, ತನಿಖಾ ತಂಡದ ವರದಿ ಆಧರಿಸಿ ಕ್ರಮ ಕೈಗೊಳ್ಳುವ ಆಶ್ವಾಸನೆ ನೀಡಿದ್ದರು. ಆದರೆ, ತನಿಖಾ ತಂಡ ವರದಿ ಕೊಟ್ಟು ಒಂದು ವರ್ಷವಾದರೂ ಏನೂ ಮಾಡಿಲ್ಲ. ಅಲ್ಲದೇ ರವೀಂದ್ರ ರತ್ನಾಕರ ಅವರನ್ನು ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ನೇಮಿಸಿಕೊಂಡು ತಮ್ಮ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಿ ನೌಕರರ ದುರ್ನಡತೆಗೆ ಸಂಬಂಧಿಸಿದಂತೆ ಶಿಸ್ತು ಕ್ರಮ ಜರುಗಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2021ರ ಅಕ್ಟೋಬರ್ 4ರಂದು ಹೊರಡಿಸಿರುವ ಸುತ್ತೋಲೆ ಪ್ರಕಾರ, ತನಿಖಾ ತಂಡ ವರದಿ ಸಲ್ಲಿಸಿದ ಒಂಬತ್ತು ತಿಂಗಳೊಳಗೆ ಕ್ರಮ ಜರುಗಿಸಬೇಕು. ಆದರೆ, ಈ ಪ್ರಕರಣದಲ್ಲಿ ಏನೂ ಮಾಡಿಲ್ಲ. ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನ್ಯಾಯ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.

‘ಸಂಪುಟದಿಂದ ಕೈಬಿಡಿ’

ಭ್ರಷ್ಟಾಚಾರದಲ್ಲಿ ಶಾಮಿಲಾಗಿರುವ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಭ್ರಷ್ಟ ಅಧಿಕಾರಿಗಳ ಬೆನ್ನಿಗೆ ನಿಂತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಓಂಪ್ರಕಾಶ ರೊಟ್ಟೆ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.