ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ಸಂವಿಧಾನ ಕಾನೂನುಗಳ ತಾಯಿ

Last Updated 9 ನವೆಂಬರ್ 2020, 15:47 IST
ಅಕ್ಷರ ಗಾತ್ರ

ಬೀದರ್: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮ ಇಲ್ಲಿಯ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಾಡಲೂರು ಸತ್ಯ ನಾರಾಯಣಾಚಾರ್ಯ ಕಾರ್ಯಕ್ರಮ ಉದ್ಘಾಟಿಸಿ, ‘ಭಾರತೀಯ ಸಂವಿಧಾನವು ಕಾನೂನುಗಳ ತಾಯಿ ಇದ್ದಂತೆ’ ಎಂದು ತಿಳಿಸಿದರು.
.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಗದೀಶ ಜಗತಾಪ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ರಾಧಾ ಎಚ್.ಆರ್., ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಝರೀನಾ, ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಪಿ.ಗೌಡ, ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಯಮನಪ್ಪ ಕೆ., ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ., ಪ್ರಧಾನ ಸಿವಿಲ್ ನ್ಯಾಯಾಧೀಶೆ ಅಪರ್ಣಾ, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿನಾಯಕ ವಣಖಂಡೆ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಈಶ್ವರ ಮುಸಲ್ಮಾರಿ, ಜಿಲ್ಲಾ ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಅಂಬಾದಾಸ ವಾಗರಾಜ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗದಗೆಪ್ಪ ಇದ್ದರು.

ಸ್ವಯಂ ಸೇವಕರು ಹಾಗೂ ಪ್ಯಾನಲ್ ವಕೀಲರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಡಳಿತ ಸಹಾಯಕ ಶಂಕ್ರಪ್ಪ ಜನಕಟ್ಟಿ ಪಾಲ್ಗೊಂಡಿದ್ದರು.
ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಧನರಾಜ ಬಿರಾದಾರ ನಿರೂಪಿಸಿದರು. ತಾ.ಪಂ. ಸಹಾಯಕ ನಿರ್ದೇಶಕ ಶರತಕುಮಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT