ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷಯರೋಗ ಪತ್ತೆ ಆಂದೋಲನ: ಜಾಗೃತಿ ಜಾಥಾ

Last Updated 22 ನವೆಂಬರ್ 2019, 15:51 IST
ಅಕ್ಷರ ಗಾತ್ರ

ಬೀದರ್‌: ನವೆಂಬರ್ 25ರಿಂದ ಡಿಸೆಂಬರ್ 10ರವರೆಗೆ ಜಿಲ್ಲೆಯಾದ್ಯಂತ ನಡೆಯಲಿರುವ ಕ್ಷಯರೋಗ ಪತ್ತೆ ಆಂದೋಲನದ ಪ್ರಯುಕ್ತ ಆರೋಗ್ಯ ಇಲಾಖೆಯಿಂದ ಶುಕ್ರವಾರ ಜಾಗೃತಿ ಜಾಥಾ ನಡೆಸಲಾಯಿತು.

ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್‌ ಜಾಥಾಕ್ಕೆ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೀರಣ್ಣ ರೆಡ್ಡಿ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ದೀಪಾ ಖಂಡ್ರೆ, ಎಸ್.ಎಂ.ಒ,ಕಲಬುರ್ಗಿ, ಡಾ.ಅನಿಲಕುಮಾರ ತಾಳಿಕೋಟಿ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಹಾಗೂ ಆರ್.ಎನ್.ಟಿ.ಸಿ.ಪಿ. ಕಾರ್ಯಕ್ರಮದ ಸಿಬ್ಬಂದಿ ಪಾಲ್ಗೊಂಡಿದ್ದರು.

ಡಿಎಚ್‌ಒ ಕಚೇರಿ ಆವರಣದಿಂದ ಆರಂಭವಾದ ಜಾಥಾ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಭಗತಸಿಂಗ್ ವೃತ್ತ, ಜಿಲ್ಲಾಧಿಕಾರಿ ಕಚೇರಿ ರಸ್ತೆ, ಗುದಗೆ ಆಸ್ಪತ್ರೆ ಹಾಗೂ ರೋಟರಿ ವೃತ್ತದ ಮಾರ್ಗವಾಗಿ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ಆವರಣಕ್ಕೆ ತಲುಪಿ ಮುಕ್ತಾಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT