ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಚುನಾವಣೆಯಲ್ಲಿ ಪಾಠ: ಫರ್ನಾಂಡೀಸ್ ಹಿಪ್ಪಳಗಾಂವ್ ಎಚ್ಚರಿಕೆ

ಸದಾಶಿವ ಆಯೋಗ ವರದಿ ಜಾರಿಗೆ ಮೀನ ಮೇಷ ಆರೋಪ
Last Updated 4 ಡಿಸೆಂಬರ್ 2020, 12:37 IST
ಅಕ್ಷರ ಗಾತ್ರ

ಬೀದರ್: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಮೀನ ಮೇಷ ಎಣಿಸುತ್ತಿರುವ ಆಡಳಿತಾರೂಢ ಬಿಜೆಪಿ, ಪ್ರತಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಮಾದಿಗ ದಂಡೋರಾ ಹೋರಾಟ ಸಮಿತಿಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಫರ್ನಾಂಡೀಸ್ ಹಿಪ್ಪಳಗಾಂವ್ ಎಚ್ಚರಿಕೆ ನೀಡಿದರು.

ನಗರದಲ್ಲಿ ನಡೆದ ಮಾದಿಗ ದಂಡೋರಾ ಹೋರಾಟ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‍ನ ಸಿದ್ದರಾಮಯ್ಯ ನೇತೃತ್ವದ ಹಾಗೂ ಜೆಡಿಎಸ್‍ನ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರಗಳು ವರದಿ ಅನುಷ್ಠಾನದ ಹುಸಿ ಭರವಸೆ ಮಾತ್ರ ನೀಡಿದ್ದವು. ಈಗಿನ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವೂ ವರದಿ ಜಾರಿಗೆ ಆಸಕ್ತಿ ತೋರುತ್ತಿಲ್ಲ ಎಂದು ಆಪಾದಿಸಿದರು.

ಸಾರ್ವತ್ರಿಕ ಚುನಾವಣೆಗಳಲ್ಲಿ ಮಾದಿಗರ ಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದ ರಾಜಕೀಯ ಪಕ್ಷಗಳು ಮಾದಿಗರನ್ನು ಕಡೆಗಣಿಸುತ್ತಲೇ ಬಂದಿವೆ ಎಂದು ಆರೋಪಿಸಿದರು.

ಜಿಲ್ಲೆಯ ಮಾದಿಗ ಸಮಾಜದ ಹಿರಿಯ ಮುಖಂಡ ಚಂದ್ರಕಾಂತ ಹಿಪ್ಪಳಗಾಂವ್ ಅಧ್ಯಕ್ಷತೆ ವಹಿಸಿದ್ದರು. ಮಾದಿಗ ದಂಡೋರಾ ಹೋರಾಟ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಹೆಗಡೆ, ಪ್ರಧಾನ ಕಾರ್ಯದರ್ಶಿ ಶಿವರಾಜ ದೊಡ್ಡಿ, ಉಪಾಧ್ಯಕ್ಷ ರಾಜಕುಮಾರ ಹಳ್ಳಿಖೇಡಕರ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ವಿಜಯಕುಮಾರ ಹಿಪ್ಪಳಗಾಂವ್, ಹುಮನಾಬಾದ್ ತಾಲ್ಲೂಕು ಘಟಕದ ಅಧ್ಯಕ್ಷ ರವಿ ನಿಜಾಂಪುರೆ, ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ದತ್ತಾತ್ರಿ ಜ್ಯೋತಿ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಪೀಟರ್ ಶ್ರೀಮಂಡಲ್, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಸಂಜು ಸಂಗನೋರ, ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ವೀರಶೆಟ್ಟಿ ಬಂಬಳಗೆ, ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಸ್ವಾಮಿದಾಸ ಮುದಾಳೆ, ಮುಖಂಡರಾದ ಸ್ವಾಮಿದಾಸ ಮೇಗಾ, ಮಾರುತಿ ಲಾಡೆ, ಸುಧಾಕರ ಕೊಳ್ಳೂರ, ಪುಟ್ಟರಾಜ ರೇಕುಳಗಿ, ರಾಜಕುಮಾರ ಭಟಾರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT