ಸೋಮವಾರ, ಮೇ 10, 2021
25 °C
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿಕೆ

ಸಿದ್ದರಾಮಯ್ಯ ಬರೀ ಟೀಕಿಸುವುದು ಬಿಡಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವಕಲ್ಯಾಣ: `ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಟೀಕಿಸುವ ಕೀಳು ಮಟ್ಟದ ರಾಜಕೀಯ ಬಿಡಬೇಕು' ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಇಲ್ಲಿನ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರ ಪ್ರಚಾರ ಸಭೆಯ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

`ಸಿದ್ದರಾಮಯ್ಯನವರು ಮೊದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಜತೆಗಿನ ಭಿನ್ನಾಭಿಪರಾಯ ಸರಿಪಡಿಸಿಕೊಳ್ಳಲಿ. ತನ್ನ ತಟ್ಟೆಯಲ್ಲಿ ಹೆಗ್ಗಣ ಬಿದ್ದಾಗ ಅನ್ಯರ ತಟ್ಟೆಯಲ್ಲಿ ಏನು ಬಿದ್ದಿದೆ ಎಂದು ಹುಡುಕುವುದು ಸರಿಯಲ್ಲ' ಎಂದರು.

`ಬಿಜೆಪಿಯ ಪ್ರಭಾವ ಹೆಚ್ಚುತ್ತಿದೆ. ಮೋದಿ ಅವರು ಉತ್ತಮ ನಾಯಕ ಆಗಿದ್ದಾರೆ. ಆದರೆ, ಕಾಂಗ್ರೆಸ್ ಗೆ ಉತ್ತಮ ನಾಯಕರಿಲ್ಲದೆ ಕಮರುತ್ತಿದೆ. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅನೇಕ ಮುಖಂಡರು ಬಿಜೆಪಿ ಸೇರ್ಪಡೆ ಆಗುತ್ತಿದ್ದಾರೆ. ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ
ಗೆಲ್ಲುವುದು ನಿಶ್ಚಿತ' ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.