ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಕರು ಮಕ್ಕಳ ಆತ್ಮಸ್ಥೈರ್ಯ ವೃದ್ಧಿಸಲಿ

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ: ಚೇಗರೆಡ್ಡಿ ಸಲಹೆ
Last Updated 13 ಸೆಪ್ಟೆಂಬರ್ 2022, 16:38 IST
ಅಕ್ಷರ ಗಾತ್ರ

ಬೀದರ್: ಪಾಲಕರು ಹಾಗೂ ಶಿಕ್ಷಕರು ಮಕ್ಕಳ ಆತ್ಮಸ್ಥೈರ್ಯ ವೃದ್ಧಿಸಬೇಕೇ ವಿನಃ ಅವರ ಮೇಲೆ ಒತ್ತಡ ಹೇರಬಾರದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಎಸ್. ಚೇಗರೆಡ್ಡಿ ಸಲಹೆ ಮಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಘಟಕ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಸ್‍ಎಸ್‍ಎಸ್ ಘಟಕ 1 ಮತ್ತು 2 ರ ಸಹಯೋಗದಲ್ಲಿ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಜೀವ ಅಮೂಲ್ಯವಾಗಿದೆ. ಅದನ್ನು ಕಾಯ್ದುಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಕೆ. ಕನಕಟ್ಟೆ ಮಾತನಾಡಿ, ವಿಶ್ವದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಈ ಪ್ರಕರಣಗಳಲ್ಲಿ ಭಾರತ 15ನೇ ಸ್ಥಾನದಲ್ಲಿದೆ. ಇದರಲ್ಲಿ 15 ರಿಂದ 24 ವರ್ಷದ ಒಳಗಿನವರ ಆತ್ಮಹತ್ಯೆ ಪ್ರಕರಣಗಳೂ ಸೇರಿವೆ ಎಂದು ತಿಳಿಸಿದರು.


ವಿದ್ಯಾರ್ಥಿಗಳು ಯಾವುದೇ ಸಮಸ್ಯೆ ಬಂದರೂ ಅದನ್ನು ಧೈರ್ಯದಿಂದ ಎದುರಿಸಬೇಕು ಎಂದು ಕಿವಿಮಾತು ಹೇಳಿದರು.
ಮನೋವೈದ್ಯ ಡಾ. ಅಭಿಜೀತ್ ಪಾಟೀಲ ಮಾತನಾಡಿ, ಅತಿಯಾದ ಮೊಬೈಲ್ ಬಳಕೆಯಿಂದ ಯುವಕರು ದೈಹಿಕ ಹಾಗೂ ಮಾನಸಿಕ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಕುಟುಂಬದಲ್ಲಿ ಯಾರಾದರೂ ಆತ್ಮಹತ್ಯೆಗೆ ಒಳಗಾದಲ್ಲಿ ಅದು ಕುಟುಂಬದ ಯುವ ಸದಸ್ಯರ ಮೇಲೆ ಪರಿಣಾಮ ಬೀರುತ್ತದೆ. ಚಿಕಿತ್ಸೆ, ಆಪ್ತ ಸಮಾಲೋಚನೆ ಹಾಗೂ ಜಾಗೃತಿಯಿಂದ ಆತ್ಮಹತ್ಯೆಗಳನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಕಿರಣ ಪಾಟೀಲ ಮಾತನಾಡಿ, ಆತ್ಮಹತ್ಯೆ ತಪ್ಪಿಸುವುದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಉದ್ದೇಶವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ ಮಾತನಾಡಿದರು.

ಅಮಲ್ ಷರೀಫ್, ಎನ್.ಎಸ್.ಎಸ್. ಸಂಯೋಜನಾಧಿಕಾರಿ ಪ್ರೊ. ಬಸವರಾಜ ರಾಜೋಳೆ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೀರಶೆಟ್ಟಿ ಚನಶೆಟ್ಟಿ, ಕಾಲೇಜು ಪ್ರಾಚಾರ್ಯ ಇದ್ದರು. ಶೀಲಾ ನಿರೂಪಿಸಿದರು. ಮಲ್ಲಿಕಾರ್ಜುನ ಗುಡ್ಡೆ ಸ್ವಾಗತಿಸಿದರು. ಸೀಮಪ್ಪ ಬಿ. ಸುರಕುರೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT