ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರು ವೃತ್ತಿ ಗೌರವ ಕಾಪಾಡಲಿ

ಬಸವ ತತ್ವ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೈಜಿನಾಥ ಕಮಠಾಣೆ ಸಲಹೆ
Last Updated 5 ಸೆಪ್ಟೆಂಬರ್ 2020, 14:40 IST
ಅಕ್ಷರ ಗಾತ್ರ

ಬೀದರ್: ‘ಎಲ್ಲ ವೃತ್ತಿಗಳಲ್ಲೇ ಶಿಕ್ಷಕ ವೃತ್ತಿ ಶ್ರೇಷ್ಠವಾದದ್ದು. ಶಿಕ್ಷಕರು ವೃತ್ತಿ ಗೌರವ ಕಾಪಾಡಿಕೊಳ್ಳಬೇಕು’ ಎಂದು ಬಸವ ತತ್ವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೈಜಿನಾಥ ಕಮಠಾಣೆ ಸಲಹೆ ಮಾಡಿದರು.

ಇಲ್ಲಿಯ ವಿದ್ಯಾನಗರ ಕಾಲೊನಿಯಲ್ಲಿ ವಿ.ಕೆ. ಇಂಟರ್‍ನ್ಯಾಷನಲ್ ಪ್ರಾಥಮಿಕ, ಪ್ರೌಢಶಾಲೆ, ಪದವಿ ಹಾಗೂ ಬಿ.ಎಡ್ ಕಾಲೇಜು ವತಿಯಿಂದ ಶನಿವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಕ್ಕಳು ಶಿಕ್ಷಕರನ್ನೇ ಅನುಕರಿಸುತ್ತಾರೆ. ಕಾರಣ ಶಿಕ್ಷಕರು ಮಾದರಿಯಾಗಿರಬೇಕು. ತಮ್ಮ ಜ್ಞಾನ ಧಾರೆ ಎರೆಯುವ ಮೂಲಕ ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಪ್ರಯತ್ನಿಸಬೇಕು’ ಎಂದು ಹೇಳಿದರು.

‘ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಏನು ಬೇಕಾದರೂ ಸಾಧನೆ ಮಾಡಬಹುದು. ಹೀಗಾಗಿ ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಬೇಕು’ ಎಂದು ಹೇಳಿದರು.

‘ಪ್ರತಿಭಾವಂತ ಶಿಕ್ಷಕರಿಗೆ ಸಂಸ್ಥೆಯ ಶಾಲಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು’ ಎಂದು ತಿಳಿಸಿದರು.

ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಜಯಕುಮಾರ ಕಾಂಗೆ ಅವರು ಶಿಕ್ಷಕರ ದಿನಾಚರಣೆ ಅಂಗವಾಗಿ ಲಕ್ಷ್ಮೀಬಾಯಿ ಕಮಠಾಣೆ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ದಿಲೀಪ್ ಕಮಠಾಣೆ, ಉಪ ಪ್ರಾಚಾರ್ಯ ಧನರಾಜ ಪಾಟೀಲ, ವಿ.ಕೆ. ಇಂಟರ್‌ನ್ಯಾಷನಲ್ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯೆ ಶಿವಲೀಲಾ ಟೊಣ್ಣೆ, ಉಪನ್ಯಾಸಕ ಮಹಮ್ಮದ್ ಯುನೂಸ್, ವಿ.ಕೆ. ಇಂಟರ್‌ನ್ಯಾಷನಲ್ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮುಖ್ಯ ಶಿಕ್ಷಕ ರವಿ ದೇವಾ ಅವರಿಗೆ 2020ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದರು.

ಜನ್ಮದಿನ ಆಚರಣೆ: ಇದೇ ಸಂದರ್ಭದಲ್ಲಿ ಕೇಕ್ ಕತ್ತರಿಸುವ ಮೂಲಕ ಜಯಕುಮಾರ ಕಾಂಗೆ ಅವರ ಜನ್ಮದಿನ ಆಚರಿಸಲಾಯಿತು. ಸಂಸ್ಥೆ ಪದಾಧಿಕಾರಿಗಳು ಹಾಗೂ ಶಿಕ್ಷಕರು ಅವರಿಗೆ ಶುಭ ಕೋರಿದರು.

ವಕೀಲ ಸತೀಶ, ಮುಖಂಡ ಶಿವಕುಮಾರ ಭಾಲ್ಕೆ, ಪ್ರದೀಪ ಗಾಜಲ್, ಝರೆಪ್ಪ ಹೊಸಳ್ಳೆ, ಅರುಣ ಸೂರ್ಯವಂಶಿ, ಪ್ರಿಯಂಕಾ ಗುಡ್ಡೆ, ಶಿಕ್ಷಕಿ ವೈಶಾಲಿ ಕಮಠಾಣೆ, ಸಾಫ್ಟವೇರ್ ಎಂಜಿನಿಯರ್ ದೀಕ್ಷಾ ಕಮಠಾಣೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT