ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲಿ

ಯುವ ಮುಂದಾಳತ್ವ ಶಿಬಿರ: ಶರಣಪ್ಪ ಸಿಕೇನಪುರ ಹೇಳಿಕೆ
Last Updated 2 ಫೆಬ್ರುವರಿ 2023, 13:18 IST
ಅಕ್ಷರ ಗಾತ್ರ

ಬೀದರ್: ಯುವಕರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಗ್ಲೊಬಲ್ ಸೈನಿಕ ಅಕಾಡೆಮಿಯ ಅಧ್ಯಕ್ಷ ಶರಣಪ್ಪ ಸಿಕೇನಪುರ ಹೇಳಿದರು.


ನಗರದ ನೌಬಾದ್‍ನ ವಿಶ್ವಾಸ ಧಾಮದಲ್ಲಿ ನೆಹರೂ ಯುವ ಕೇಂದ್ರ ಹಾಗೂ ರೈಸಿಂಗ್ ಹ್ಯಾಂಡ್ಸ್ ಕಲೆ ಮತ್ತು ಸಾಂಸ್ಕೃತಿಕ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.


ಜೀವನದಲ್ಲಿ ಏನನ್ನಾದರೂ ಸಾಧಿಸಿ ತೋರಬೇಕು. ರಾಷ್ಟ್ರ ಸೇವೆಗೆ ಸದಾ ಕಂಕಣ ಬದ್ಧರಾಗಿರಬೇಕು ಎಂದು ತಿಳಿಸಿದರು.
ಉದ್ಘಾಟನೆ ನೆರವೇರಿಸಿದ ಬ್ರಹ್ಮಕುಮಾರಿ ಕೇಂದ್ರ ಪಾವನಧಾಮದ ಗುರುದೇವಿ ಬಹೆನ್‍ಜಿ ಮಾತನಾಡಿ, ಯುವಕರು ದೇಶದ ಸಂಪತ್ತು. ಸಚ್ಚಾರಿತ್ರ್ಯ ಮೈಗೂಡಿಸಿಕೊಳ್ಳಬೇಕು. ಮಹಾ ಪುರುಷರ ಜೀವನ ಚರಿತ್ರೆ ಅರಿಯಬೇಕು. ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ತಿಳಿಸಿದರು.


ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ, ಬಿ.ವಿ. ಭೂಮರಡ್ಡಿ ಪದವಿ ಕಾಲೇಜು ಪ್ರಾಚಾರ್ಯ ಡಾ. ಪಿ. ವಿಠ್ಠಲರೆಡ್ಡಿ ಮಾತನಾಡಿದರು.


ರಾಜ್ಯ ಯುವ ಪ್ರಶಸ್ತಿ ಪುರಸ್ಕøತ ಶಿವಕುಮಾರ ಸ್ವಾಮಿ ಉಪಸ್ಥಿತರಿದ್ದರು. ರೈಸಿಂಗ್ ಹ್ಯಾಂಡ್ಸ್ ಕಲೆ ಮತ್ತು ಸಾಂಸ್ಕøತಿಕ ಯುವಕ ಸಂಘದ ಅಧ್ಯಕ್ಷ ಸತೀಶ್ ಬೆಳಕೋಟೆ ಸ್ವಾಗತಿಸಿದರು. ಕಾರ್ತಿಕ ಪಟಪಳ್ಳಿ ನಿರೂಪಿಸಿದರು. ನವಿನಕುಮಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT