ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಖಾಸಗಿ ಆಸ್ಪತ್ರೆಗಳ ನೋಂದಣಿ ಕಡ್ಡಾಯ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ ಸೂಚನೆ
Last Updated 14 ಜೂನ್ 2020, 11:07 IST
ಅಕ್ಷರ ಗಾತ್ರ

ಚಿಟಗುಪ್ಪ: ‘ಖಾಸಗಿ ಆಸ್ಪತ್ರೆಗಳ ವೈದ್ಯರು ಕರ್ನಾಟಕ ಖಾಸಗಿ ಆಸ್ಪತ್ರೆಗಳ ನೋಂದಣಿ ಅಧಿನಿಯಮ ಕಾಯ್ದೆ ಅಡಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ ತಿಳಿಸಿದರು.

ಇಲ್ಲಿಯ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಬಳಿಕ ಮಾತನಾಡಿದರು.

ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಮೂಲ ಸೌಲಭ್ಯ ಒದಗಿಸಬೇಕು. ಆಸನದ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್, ವೈದ್ಯಕೀಯ ಉಪಕರಣ ಎಲ್ಲವೂ ಲಭ್ಯವಿರಬೇಕು. ಅನಾವಶ್ಯಕವಾಗಿ ಹಣ ವಸೂಲಿ ಮಾಡಬಾರದು. ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು’ ಎಂದರು.

‘ಪಟ್ಟಣದಲ್ಲಿ ಶೇ 90 ರಷ್ಟು ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಿಕೊಂಡಿಲ್ಲ. ಒಂದು ವಾರ ಕಾಲಾವಕಾಶ ನೀಡಲಾಗಿದೆ’ ಎಂದು ತಿಳಿಸಿದರು.

ವೈದ್ಯಾಧಿಕಾರಿ ಡಾ.ವೀರನಾಥ ಕನಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT