ಗೋರನಳ್ಳಿ(ಜನವಾಡ): ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎರಡು ದಿನಗಳ ಟೆಕ್ನೋತ್ಸವ ಯುಕ್ತಿ–2025ಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಮೊದಲ ದಿನ ಅಂತರ ಕಾಲೇಜು ಮಟ್ಟದ ಚೆಸ್, ಕೇರಂ, ನೃತ್ಯ, ಗಾಯನ, ತಾಂತ್ರಿಕ ಚಟುವಟಿಕೆ, ಪ್ರಬಂಧ ಮಂಡನೆ, ಕಾರ್ಯಾಗಾರ ಮೊದಲಾದ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

ಟೆಕ್ನೋತ್ಸವ ಯುಕ್ತಿ ಉದ್ಘಾಟಿಸಿದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ ದೇವೇಂದ್ರ ಹಂಚೆ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳೂ ಬಹಳ ಅವಶ್ಯಕ ಎಂದು ಹೇಳಿದರು.

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ ಮಾತನಾಡಿದರು. ಕಾಲೇಜು ಪ್ರಾಚಾರ್ಯೆ ವಿನಿತಾ ಪಾಟೀಲ ಮಾತನಾಡಿ, ಟೆಕ್ನೋತ್ಸವ ಯುಕ್ತಿ ನಿಮಿತ್ತ ಎರಡು ದಿನ ವಿವಿಧ ಚಟುವಟಿಕೆಗಳು ನಡೆಯಲಿವೆ ಎಂದು ತಿಳಿಸಿದರು.

ಶರಣಬಸವೇಶ್ವರ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಸತೀಶ ಪ್ರತಾಪುರ, ಶರಣಬಸಪ್ಪ ಶೆಟಕಾರ್, ಬಸವಲಿಂಗ ಸ್ವಾಮಿ, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.