ಬೀದರ್: ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಕೇಂದ್ರಕ್ಕೆ ಮರು ಶಿಫಾರಸು ಮಾಡಬೇಕು ಎಂದು ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ಒತ್ತಾಯಿಸಿದೆ.
ಸಮಿತಿಯ ಪದಾಧಿಕಾರಿಗಳು ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.
ನಾಗಮೋಹನದಾಸ್ ಸಮಿತಿ ವರದಿಯೊಂದಿಗೆ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿ ಐದು ವರ್ಷಗಳಾಗಿವೆ. ಕೇಂದ್ರ ಶಿಫಾರಸು ಅನುಮೋದಿಸದೆ, ವಾಪಸ್ ಕಳುಹಿಸಿದೆ ಎಂದು ಹೇಳಿದರು. ಚುನಾವಣೆಗೆ ಮುನ್ನ ಕೇಂದ್ರಕ್ಕೆ ಮರು ಮಾಡಬೇಕು ಎಂದು ಆಗ್ರಹಿಸಿದರು.
ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ, ಬಸವ ಮಂಟಪದ ಮಾತೆ ಸತ್ಯದೇವಿ, ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ, ವಿಶ್ವಕ್ರಾಂತಿ ದಿವ್ಯಪೀಠದ ಓಂಪ್ರಕಾಶ ರೊಟ್ಟೆ, ಮಲ್ಲಿಕಾರ್ಜುನ ಶೆಂಬೆಳ್ಳಿ, ಬಸವಂತರಾವ್ ಬಿರಾದಾರ, ಬಸವರಾಜ ಸಂಗಮದ, ವಿಶ್ವನಾಥ ಪಾಟೀಲ ಗೊಂದೆಗಾಂವ್, ರವಿಕಾಂತ ಬಿರಾದಾರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.