ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ತಾಲ್ಲೂಕು, ಹೋಬಳಿ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ

ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಹೇಳಿಕೆ
Last Updated 2 ಫೆಬ್ರುವರಿ 2021, 13:24 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯ ತಾಲ್ಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲೂ ಜಾಗತಿಕ ಲಿಂಗಾಯತ ಮಹಾಸಭಾ ಸದಸ್ಯತ್ವ ಅಭಿಯಾನ ನಡೆಸಲಾಗುವುದು ಎಂದು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 2,500ಕ್ಕೂ ಅಧಿಕ ಜನ ಮಹಾಸಭಾದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಇನ್ನೂ ಹೆಚ್ಚು ಹೆಚ್ಚು ಸದಸ್ಯತ್ವ ನೋಂದಣಿ ಮೂಲಕ ಸಂಘಟನೆಗೆ ಬಲ ತುಂಬಲಾಗುವುದು ಎಂದು ಹೇಳಿದ್ದಾರೆ.

ಲಿಂಗಾಯತರ ಅಸ್ಮಿತೆಯ ಪ್ರಶ್ನೆಯಾಗಿರುವ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಹೋರಾಟಕ್ಕಾಗಿಯೇ ರಚಿಸಲಾದ ಮಹಾಸಭಾ ಪಕ್ಷಾತೀತವಾಗಿದೆ. ಲಿಂಗಾಯತದ 102 ಒಳ ಪಂಗಡಗಳ ಎಲ್ಲರೂ ಸ್ವಯಂ ಪ್ರೇರಣೆಯಿಂದ ಮಹಾಸಭಾ ಸದಸ್ಯತ್ವ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಬೀದರ್‌ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ತೆರೆಯಲಾದ ಮಹಾಸಭಾ ಜಿಲ್ಲಾ ಘಟಕದ ಕಚೇರಿಯಲ್ಲಿ ಸದಸ್ಯತ್ವ ನೋಂದಣಿ ವಿಭಾಗವನ್ನೇ ಆರಂಭಿಸಲಾಗಿದೆ. ಇಲ್ಲಿಗೆ ಭೇಟಿ ನೀಡಿ ಸದಸ್ಯತ್ವ ನೋಂದಾಯಿಸಬಹುದು. ಸದಸ್ಯತ್ವಕ್ಕೆ ಸಂಬಂಧಿಸಿದ ಮಾಹಿತಿಗೆ ಮಹಾಸಭಾ ಜಿಲ್ಲಾ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಜೊನ್ನಿಕೇರಿ (9449274994) ಅವರನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಈಗಾಗಲೇ ಮಹಾಸಭಾಕ್ಕೆ ಬೀದರ್‌ನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸಲಾಗಿದೆ. ಆದರೂ, ದಾಖಲೆಯ ಸದಸ್ಯತ್ವ ನೋಂದಣಿಯ ಗುರಿ ಇಟ್ಟುಕೊಳ್ಳಲಾಗಿದೆ. ಜಿಲ್ಲೆಯ ಮಠಾಧೀಶರು ಹಾಗೂ ಬಸವ ಪರ ಸಂಘಟನೆಗಳ ಪದಾಧಿಕಾರಿಗಳು ಸಹಕಾರ ನೀಡುತ್ತಿದ್ದು, ಈ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.

ಮಹಾಸಭಾ ಸ್ವತಂತ್ರ ಧರ್ಮ ಮಾನ್ಯತೆ ಹಾಗೂ ಅಲ್ಪಸಂಖ್ಯಾತರ ಸ್ಥಾನಮಾನದಿಂದ ದೊರಕಲಿರುವ ಸೌಲಭ್ಯಗಳ ಅರಿವು ಮೂಡಿಸುವುದರೊಂದಿಗೆ ಲಿಂಗಾಯತರನ್ನು ಒಗ್ಗೂಡಿಸಲಿದೆ ಎಂದು ಹೇಳಿದ್ದಾರೆ.
ತಾಲ್ಲೂಕು ಘಟಕ ರಚನೆ ಶೀಘ್ರ: ಮಹಾಸಭಾದ ತಾಲ್ಲೂಕು ಘಟಕಗಳನ್ನು ಶೀಘ್ರದಲ್ಲಿಯೇ ರಚಿಸಲಾಗುವುದು ಎಂದು ತಿಳಿಸಿದ್ದಾರೆ.

***
ಬೇಲೂರಿನಲ್ಲಿ 200 ಜನರಿಂದ ಸದಸ್ಯತ್ವ
ಹುಲಸೂರು ತಾಲ್ಲೂಕಿನ ಬೇಲೂರಿನಲ್ಲಿ ಒಂದೇ ದಿನ 200 ಜನ ಜಾಗತಿಕ ಲಿಂಗಾಯತ ಮಹಾಸಭಾದ ಸದಸ್ಯತ್ವ ಪಡೆದುಕೊಂಡಿದ್ದಾರೆ.
ಗ್ರಾಮದ ವಿರಕ್ತ ಮಠದ ಶಿವಕುಮಾರ ಸ್ವಾಮೀಜಿ ಅವರ ಕರೆಗೆ ಓಗೊಟ್ಟು ಮಹಾಸಭಾ ಸದಸ್ಯತ್ವ ನೋಂದಣಿ ಮಾಡಿಸಿದ್ದಾರೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ತಿಳಿಸಿದ್ದಾರೆ.

ಬೇಲೂರು ಗ್ರಾಮಸ್ಥರು ಇತರರಿಗೆ ಮಾದರಿಯಾಗಿದ್ದಾರೆ. ಎಲ್ಲ ಗ್ರಾಮಗಳ ಲಿಂಗಾಯತರು ಸ್ವಯಂ ಪ್ರೇರಣೆಯಿಂದ ಸದಸ್ಯತ್ವ ನೋಂದಣಿ ಮಾಡಿಸಿದ್ದಲ್ಲಿ ಮಹಾಸಭಾದ ಅತ್ಯಧಿಕ ಸದಸ್ಯತ್ವದ ಗುರಿ ಬೇಗ ತಲುಪಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT