ಬೀದರ್: ‘ಬಸವ ಸಂಸ್ಕೃತಿ ಅಭಿಯಾನ’ದ ಹೆಸರನ್ನು ‘ಲಿಂಗಾಯತ ಧರ್ಮ ಅಭಿಯಾನ’ ಎಂದು ಬದಲಾಯಿಸಬೇಕು ಎಂದು ರಾಷ್ಟ್ರೀಯ ಬಸವ ದಳ ಆಗ್ರಹಿಸಿದೆ.

ಈ ಸಂಬಂಧ ಬಸವ ದಳದ ಕೇಂದ್ರ ಸಮಿತಿಯ ಅಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ನೇತೃತ್ವದಲ್ಲಿ ದಳದ ರಾಷ್ಟ್ರೀಯ ಕಾರ್ಯದರ್ಶಿ ರವಿಕಾಂತ ಬಿರಾದಾರ, ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವರಾಜ ಪಾಟೀಲ ಅತಿವಾಳ, ಶಿವಶರಣಪ್ಪ ಪಾಟೀಲ ಹಾರೂರಗೇರಿ ಅವರು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರನ್ನು ಗುರುವಾರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಅಭಿಯಾನದ ಪ್ರಮುಖ ಉದ್ದೇಶಗಳಲ್ಲಿ ‘ಲಿಂಗಾಯತ ಧರ್ಮ ಮಾನ್ಯತೆ’ಯ ಬೇಡಿಕೆಯ ವಿಷಯವನ್ನು ಕೂಡ ಸೇರಿಸಬೇಕು. ಈ ಬೇಡಿಕೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮುಟ್ಟಿಸಬೇಕು. 2019ರಲ್ಲಿ ಮಾತೆ ಮಹಾದೇವಿಯವರು ಲಿಂಗೈಕ್ಯರಾದ ನಂತರ ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಹೋರಾಟ ನಡೆದಿಲ್ಲ. ಈಗ ಬಸವ ಸಂಸ್ಕೃತಿ ಅಭಿಯಾನ ನಡೆಸಲಾಗುತ್ತಿದೆ. ಲಿಂಗಾಯತ ಧರ್ಮ ಅಭಿಯಾನ ಹೆಸರು ಇಡದಿರುವುದಕ್ಕೆ ಹಾಗೂ ಧರ್ಮ ಮಾನ್ಯತೆಯ ವಿಷಯದ ಬೇಡಿಕೆಯನ್ನು ಮುನ್ನಲೆಗೆ ತರದಕ್ಕೆ ಬಸವ ಭಕ್ತರಿಗೆ ಬೇಸರ ಮೂಡಿಸಿದೆ. ಕೂಡಲೇ ಹೆಸರು ಬದಲಿಸಿ, ಪ್ರತ್ಯೇಕ ಧರ್ಮದ ಬೇಡಿಕೆ ಇಟ್ಟುಕೊಂಡು ಜಾಗೃತಿ ಮೂಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.