ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.7ರಂದು ಲಿಂಗಾಯತ ಮಹಾಸಭಾ ಉದ್ಘಾಟನೆ: ಬಸವರಾಜ ಧನ್ನೂರ

Published 12 ಡಿಸೆಂಬರ್ 2023, 16:12 IST
Last Updated 12 ಡಿಸೆಂಬರ್ 2023, 16:12 IST
ಅಕ್ಷರ ಗಾತ್ರ

ಬೀದರ್‌: ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಹಾಗೂ ತಾಲ್ಲೂಕು ಮಹಿಳಾ ಘಟಕಗಳ ಉದ್ಘಾಟನಾ ಸಮಾರಂಭ ಜನವರಿ 7ರಂದು ನಗರದ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ಧನ್ನೂರ  ತಿಳಿಸಿದ್ದಾರೆ.

ನಗರದ ಶರಣ ಉದ್ಯಾನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾರ್ಚ್‍ನಲ್ಲಿ ಬಸವಕಲ್ಯಾಣದಲ್ಲಿ ನಡೆದ ಪ್ರಥಮ ಲಿಂಗಾಯತ ರಾಷ್ಟ್ರೀಯ ಮಹಾ ಅಧಿವೇಶನದ ಸ್ಮರಣ ಸಂಚಿಕೆ ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಗುವುದು. ಅಧಿವೇಶನಕ್ಕೆ ಶ್ರಮಿಸಿದವರನ್ನು ಇದೇ ವೇಳೆ ಸನ್ಮಾನಿಸಲಾಗುವುದು ಎಂದು ಮಂಗಳವಾರ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಮಠಾಧೀಶರು, ಮಹಾಸಭಾ ಪದಾಧಿಕಾರಿಗಳು, ಬಸವ ಪರ ಸಂಘಟನೆಗಳ ಪದಾಧಿಕಾರಿಗಳು, ಮಹಿಳಾ ಘಟಕದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮಹಾಸಭಾ ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷ ಸಿದ್ದಯ್ಯ ಕಾವಡಿ, ಮಹಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಹೊನ್ನಿಕೇರಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಮಿರ್ಚೆ, ಹಿರಿಯ ಉಪಾಧ್ಯಕ್ಷೆ ಶಕುಂತಲಾ ಬೆಲ್ದಾಳೆ, ಪ್ರಮುಖರಾದ ಜಯರಾಜ ಖಂಡ್ರೆ, ರಾಜೇಂದ್ರಕುಮಾರ ಗಂದಗೆ, ನೀಲಮ್ಮ ರೂಗನ್, ಸುವರ್ಣಾ ಚಿಮಕೋಡೆ, ದೇವಕಿ ನಾಗೂರೆ, ಬಸವರಾಜ ತೊಂಡಾರೆ, ಧನರಾಜ ರಾಗಾ, ಭಾರತಿ ಆರ್. ಪಾಟೀಲ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT