ಸೋಮವಾರ, ಮೇ 23, 2022
24 °C

ಲಿಂಗರಾಜ ಅಪ್ಪ ಕಾಲೇಜು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಯಲ್ಲಿ ಸಾಧನೆಗೈದ ಬೀದರ್ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ ಹಾಗೂ ಮಾತೋಶ್ರೀ ಡಾ. ದಾಕ್ಷಾಯಣಿ ತಾಯಿ ಅವರು ಸನ್ಮಾನಿಸಿದರು.

ಸಿವಿಲ್ ವಿಭಾಗದ ಆರನೇ ಸೆಮಿಸ್ಟರ್‍ನಲ್ಲಿ 7ನೇ ರ್ಯಾಂಕ್ ಹಾಗೂ ಐದನೇ ಸೆಮಿಸ್ಟರ್‍ನಲ್ಲಿ 10ನೇ ರ್ಯಾಂಕ್ ಗಳಿಸಿ ಕಲ್ಯಾಣ ಕರ್ನಾಟಕಕ್ಕೆ ಮೊದಲಿಗರಾಗಿ ಹೊರ ಹೊಮ್ಮಿದ ಆಯೇಷಾ ಅಹಮ್ಮದ್ ಖಾನ್, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ ಸೌಮ್ಯಶ್ರೀ ಪಾಂಚಾಳ ಹಾಗೂ ಶಾಂತಮ್ಮ ಕಣಜೆ ಅವರನ್ನು ಕಲಬುರ್ಗಿಯಲ್ಲಿ ಶಾಲು ಹೊದಿಸಿ ಸತ್ಕರಿಸಿದರು.

ಆಯೇಷಾಗೆ ₹. 11 ಸಾವಿರ, ಸೌಮ್ಯಶ್ರೀ ಮತ್ತು ಶಾಂತಮ್ಮಗೆ ತಲಾ ₹ 5 ಸಾವಿರ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ, ಸಿವಿಲ್ ವಿಭಾಗದ ಮುಖ್ಯಸ್ಥ ಕಿರಣ ಮೂಲಗೆ, ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಸಂಗಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.