ಬುಧವಾರ, ಜೂನ್ 29, 2022
26 °C

ಬಸವಕಲ್ಯಾಣ ನಗರಸಭೆ: ಒಂದು ಸ್ಥಾನಕ್ಕೆ ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವಕಲ್ಯಾಣ: ಇಲ್ಲಿನ ನಗರಸಭೆಯ 25ನೇ ವಾರ್ಡ್‌ನ ತೆರವಾದ ಸ್ಥಾನಕ್ಕೆ ಶುಕ್ರವಾರ (ಮೇ 20) ಮತದಾನ ನಡೆಯಲಿದೆ.

ಕಾಂಗ್ರೆಸ್ ಸದಸ್ಯ ರವೀಂದ್ರ ಗಾಯಕವಾಡ ಅವರು ಬಿಜೆಪಿ ಸೇರ್ಪಡೆ ಆಗಿದ್ದರಿಂದ ಸ್ಥಾನ ತೆರವಾಗಿದೆ. ಪರಿಶಿಷ್ಟ ಜಾತಿಗೆ ಮೀಸಲಿದ್ದು, ಬಿಜೆಪಿಯಿಂದ ಮನೋಜ್ ದಾದೆ, ಕಾಂಗ್ರೆಸ್‌ನಿಂದ ಪವನ್ ಗಾಯಕವಾಡ ಮತ್ತು ಜೆಡಿಎಸ್‌ನಿಂದ ರಾಹುಲ್ ಶಿಂಧೆ ಸ್ಪರ್ಧಿಸಿದ್ದಾರೆ.

ಒಟ್ಟು 2826 ಮತದಾರರು ಇದ್ದು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿನ 2 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆ ಕರ್ತವ್ಯಕ್ಕೆ 10 ಸಿಬ್ಬಂದಿ ನೇಮಿಸಲಾಗಿದೆ. ಮೇ 22ರಂದು ಮತ ಎಣಿಕೆ ನಡೆಯಲಿದೆ. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯೂ ಆದ ಬಿಇಒ ಚನ್ನಬಸಪ್ಪ ಹಳ್ಳದ್ ತಿಳಿಸಿದ್ದಾರೆ.

ಬಿರುಸಿನ ಪ್ರಚಾರ: ನಗರಸಭೆಯ ಒಂದೇ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದರೂ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷದಿಂದ ಬಿರುಸಿನ ಪ್ರಚಾರ ಕೈಗೊಳ್ಳಲಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮುಖಂಡರಾದ ವಿಜಯಸಿಂಗ್, ಮಾಲಾ ನಾರಾಯಣರಾವ್, ಎಐಸಿಸಿ ಸದಸ್ಯ ಆನಂದ ದೇವಪ್ಪ ಹಾಗೂ ಬಿಜೆಪಿಯಿಂದ ಶಾಸಕ ಶರಣು ಸಲಗರ ಪ್ರಚಾರ ಸಭೆಗಳನ್ನು ನಡೆಸಿದ್ದಾರೆ. ಜೆಡಿಎಸ್ ದಿಂದ ಶಾಸಕ ಬಂಡೆಪ್ಪ ಕಾಶೆಂಪುರ, ಮುಖಂಡ ಯಶ್ರಬಅಲಿ ಖಾದ್ರಿ ಇತರರು ಪ್ರಚಾರ ಕೈಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು