ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಡತೆ ಕುರಿತು ಭಯ ಬೇಡ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಲ್ಲಿಕಾರ್ಜುನ್

Last Updated 4 ಸೆಪ್ಟೆಂಬರ್ 2020, 11:28 IST
ಅಕ್ಷರ ಗಾತ್ರ

ಚಿಟಗುಪ್ಪ: ಪಟ್ಟಣದಲ್ಲಿ ಈಚೆಗೆ ಮಿಡತೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿದ್ದು, ರೈತರ ಆತಂಕಕ್ಕೆ ಕಾರಣವಾಗಿದೆ.

‘ಅವು ಹೊರಗಡೆಯಿಂದ ಬಂದಿಲ್ಲ. ಸ್ಥಳೀಯ ಮಿಡತೆಗಳು. ರೈತರು ಭಯ ಪಡುವ ಅಗತ್ಯ ಇಲ್ಲ’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.

‘ಮಳೆ ಹಾಗೂ ವಾತಾವರಣದಲ್ಲಿ ಉಂಟಾಗುವ ಬದಲಾವಣೆ ಕಾರಣಕ್ಕೆ ಸ್ಥಳೀಯ ಮಿಡತೆಗಳು ಎಲ್ಲೆಡೆ ಕಂಡು ಬರುತ್ತವೆ. ಇದು ಸಹಜ. ಕೆಲವು ಗಂಟೆಗಳ ನಂತರ ಅವು ಬೇರೆಡೆಗೆ ಹೋಗುತ್ತವೆ’ ಎಂದರು.

‘ಹೊರಗಿನಿಂದ ಬಂದ ಮಿಡತೆಗಳು ಹಗಲಿನಲ್ಲಿ ಅದರಲ್ಲೂ ಮುಖ್ಯವಾಗಿ ಸಂಜೆ 4 ರಿಂದ 7 ಗಂಟೆಯ ಅವಧಿಯಲ್ಲಿ ಹೊಲ, ಗದ್ದೆಗಳಿಗೆ ದಾಳಿ ಮಾಡಿ ಹಸಿರು ಎಲೆ ತಿನ್ನುತ್ತವೆ. 7 ಗಂಟೆಯ ಬಳಿಕ ಮರಗಳ ಮೇಲೆ ಕುಳಿತು ವಿಶ್ರಾಂತಿ ಪಡೆಯುತ್ತವೆ. ಅವುಗಳನ್ನು ಸಾಯಿಸಲು ರಾತ್ರಿಯೇ ಕಾರ್ಯಾಚರಣೆ ನಡೆಸಬೇಕಾಗುತ್ತದೆ. ಡ್ರೋಣ್‌, ಟ್ರ್ಯಾಕ್ಟರ್‌ನಲ್ಲಿ ಅಳವಡಿಸಿದ ಜೆಟ್‌ ಸ್ಪ್ರೇಯರ್‌ಗಳ ಮೂಲಕ ಕೀಟನಾಶಕ ಸಿಂಪಡಿಸಬೇಕಾಗುತ್ತದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT