ಭಾನುವಾರ, ಆಗಸ್ಟ್ 14, 2022
20 °C
ನ್ಯಾ.ಸತ್ಯನಾರಾಯಣಾಚಾರ್ಯ ಹೇಳಿಕೆ

19ರಂದು ಲೋಕ್‌ ಅದಾಲತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಸಹಯೋಗದಲ್ಲಿ ಡಿ.19ರಂದು ಬೃಹತ್ ಲೋಕ್ ಅದಾಲತ್ ಜಿಲ್ಲೆಯ ಎಲ್ಲ ನ್ಯಾಯಾಲಯಗಳ ಕಟ್ಟಡದಲ್ಲಿ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಾಡಲೂರ ಸತ್ಯನಾರಾಯಣಾಚಾರ್ಯ ತಿಳಿಸಿದರು.

ಅದಾಲತ್‌ನಲ್ಲಿ ಎಲ್ಲ ರೀತಿಯ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಲಾಗುವುದು ಎಂದು ನಗರದಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

ಕಕ್ಷಿದಾರರು ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ, ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು, ಕಕ್ಷಿದಾರರು, ವಕೀಲರು, ಬ್ಯಾಂಕ್‌ ಗ್ರಾಹಕರು, ಅಧಿಕಾರಿಗಳು ಭಾಗವಹಿಸಿ ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಳ್ಳಬೇಕು. ಕಳೆದ ಇ–ಲೋಕ್‌ ಅದಾಲತ್‌ನಲ್ಲಿ ಒಟ್ಟು 3,663 ಪ್ರಕರಣಗಳನ್ನು ಗುರುತಿಸಲಾಗಿತ್ತು. ಅವುಗಳ ಪೈಕಿ 1,655 ಪ್ರಕರಣಗಳನ್ನು ರಾಜಿಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ಹೇಳಿದರು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಯನ್ನು ಸಂಪರ್ಕಿಸಬಹುದಾಗಿದೆ. ಬೀದರ್ ದೂರವಾಣಿ ಸಂಖ್ಯೆ 08482–226116, ಮೊಬೈಲ್ 8971509395, 9964225217, ಔರಾದ್ 9731228169, ಬಸವಕಲ್ಯಾಣ 9902213842, ಭಾಲ್ಕಿ 9008070905 ಹಾಗೂ ಹುಮನಾಬಾದ್ 9035342125 ಅನ್ನು ಸಂಪರ್ಕಿಸಬಹುದಾಗಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು