ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ: ಬಿ.ಎಸ್‌. ಯಡಿಯೂರಪ್ಪ

Published 25 ಏಪ್ರಿಲ್ 2024, 8:49 IST
Last Updated 25 ಏಪ್ರಿಲ್ 2024, 8:49 IST
ಅಕ್ಷರ ಗಾತ್ರ

ಬೀದರ್‌: ‘ವಾತಾವರಣ ನಮಗೆ ಪೂರಕವಾಗಿದೆ. ನೂರಕ್ಕೆ ನೂರು 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ಔರಾದ್‌ನಲ್ಲಿ ಏರ್ಪಡಿಸಿರುವ ಬಿಜೆಪಿ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ನಗರದ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಗುರುವಾರ ಬಂದಿಳಿದ ಅವರು ಅಲ್ಲಿಗೆ ತೆರಳುವುದಕ್ಕೂ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದರು.

ಎಲ್ಲಿಯೇ ಹೋದರೂ ಮೋದಿ ಮೋದಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೇಂದ್ರ ಸಚಿವ ಭಗವಂತ ಖೂಬಾ ಕೂಡ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತಾರೆ ಎಂಬ ಭರವಸೆ ಇದೆ ಎಂದರು.

ಮೋದಿ ಮಹಾ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಸುದ್ದಿಗಾರರು ಗಮನ ಸೆಳೆದಾಗ, ಅವರು ಏನು ಬೇಕಾದರೂ ಮಾತಾಡಲಿ ಅದಕ್ಕೆ ನಾನು ಉತ್ತರ ಕೊಡೊಲ್ಲ ಎಂದು ಹೇಳಿ ಹೊರಟರು.

ಇತ್ತೀಚೆಗೆ ನಿಧನರಾದ ಬಿಜೆಪಿಯ ಮಾಜಿಶಾಸಕ ರಮೇಶಕುಮಾರ ಪಾಂಡೆ ಅವರ ಮನೆಗೆ ಯಡಿಯೂರಪ್ಪ ಭೇಟಿ ನೀಡಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT