ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವೆ ಮಾಡಲು ಅವಕಾಶ ಕೊಡಿ: ಸಾಗರ ಖಂಡ್ರೆ

ಕಮಲನಗರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ
Published 7 ಏಪ್ರಿಲ್ 2024, 14:36 IST
Last Updated 7 ಏಪ್ರಿಲ್ 2024, 14:36 IST
ಅಕ್ಷರ ಗಾತ್ರ

ಕಮಲನಗರ: ‘ಮೇ 7ರಂದು ನಡೆಯಲಿರುವ ಬೀದರ್‌ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ನನ್ನನ್ನು ಆಶೀರ್ವದಿಸಬೇಕು’ ಎಂದು ಪಕ್ಷದ ಅಭ್ಯರ್ಥಿ ಸಾಗರ ಖಂಡ್ರೆ ಮನವಿ ಮಾಡಿದರು.

ಪಟ್ಟಣದ ಬಸವ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿಕೊಡಿ. ನಾನು ಸದಾ ನಿಮ್ಮ ಕಷ್ಟ, ಸುಖದಲ್ಲಿ ಭಾಗಿಯಾಗಿರುತ್ತೇನೆ. ನೀವು ಕೊಡುವ ಅವಕಾಶವನ್ನು ಬಳಸಿಕೊಂಡು ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ಕೆಲಸ ಮಾಡಿ ನಂಬಿಕೆ ಉಳಿಸಿಕೊಳ್ಳುತ್ತೇನೆ’ ಎಂದು ಹೇಳಿದರು.

‘ಹಿಂದಿನ ಅವಧಿಯಲ್ಲಿ ಬಿಜೆಪಿಯಿಂದ ಭಗವಂತ ಖೂಬಾ ಸಂಸದರಾಗಿ ಆಯ್ಕೆಯಾಗಿ ಬಂದರೂ ಈ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇಲ್ಲಿಯ ಪರಿಸ್ಥಿತಿ ನೋಡಿದರೆ ರೈತರ ಬಗ್ಗೆ ಕಾಳಜಿ ಇಲ್ಲದ ಸಂಸದರಾಗಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರು ಬೂತ್ ಮಟ್ಟದಿಂದ ಕೆಲಸ ಮಾಡಿ ನನ್ನನ್ನು ಗೆಲ್ಲಿಸುವ ಮೂಲಕ ದೆಹಲಿಗೆ ಕಳುಹಿಸಿಕೊಡಬೇಕು’ ಎಂದು ಮನವಿ ಮಾಡಿದರು.

‘ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದು 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಈಗ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಪಕ್ಷ ದೇಶದ ಜನತೆಗೆ ನೀಡಿರುವ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲಾಗುವುದು’ ಎಂದು ಭರವಸೆ ನೀಡಿದರು.

ಔರಾದ್‌ ತಾಲ್ಲೂಕು ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಆನಂದ ಚವ್ಹಾಣ ಮಾತನಾಡಿದರು.

ಔರಾದ್‌ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬುರ್ಗೆ, ಭಾಲ್ಕಿ ತಾಲ್ಲೂಕು ಅಧ್ಯಕ್ಷ ಹಣಮಂತ ಚವ್ಹಾಣ, ಗಂಗಾಧರ ಮಜಗೆ, ಮಲ್ಲಿಕಾರ್ಜುನ ಪಾಟೀಲ್, ವೆಂಕಟರಾವ ಶಿಂಧೆ, ಪ್ರವೀಣ ಪಾಟೀಲ್, ಸಂತೋಷ ಬಿರಾದಾರ, ಪ್ರವೀಣ ಕದಂ, ಶಾಂತಕುಮಾರ ಬಿರಾದಾರ ಹಾಗೂ ಕಾರ್ಯಕರ್ತರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT