ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಔರಾದ್: 1150 ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

Published 2 ಮೇ 2024, 13:56 IST
Last Updated 2 ಮೇ 2024, 13:56 IST
ಅಕ್ಷರ ಗಾತ್ರ

ಔರಾದ್: ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಮತಗಟ್ಟೆ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ.

ಪಟ್ಟಣದ ಅಮರೇಶ್ವರ ಕಾಲೇಜಿನಲ್ಲಿ ತರಬೇತಿ ವ್ಯವಸ್ಥೆ ಮಾಡಲಾಗಿದೆ. ಬುಧವಾರ 570 ಹಾಗೂ ಗುರುವಾರ 580 ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು. ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಭೇಟಿ ನೀಡಿ, ‘ಚುನಾವಣಾ ಆಯೋಗ ನೀಡಿದ ಕೈಪಿಡಿ ಸರಿಯಾಗಿ ಓದಿದರೆ ನಿಮಗೆ ಎಲ್ಲವೂ ಅರ್ಥವಾಗುತ್ತದೆ. ಚುನಾವಣೆ ಎಂದರೆ ಸೂಕ್ಷ್ಮ ಕೆಲಸ. ಹೀಗಾಗಿ ಮೈಯೆಲ್ಲಾ ಕಣ್ಣಾಗಿ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

ಸಹಾಯಕ ಚುನಾವಣಾಧಿಕಾರಿ ಕೆ.ಜಿಯಾವುಲ್ಲ, ತಹಶೀಲ್ದಾರ್ ನಾಗಯ್ಯ ಹಿರೇಮಠ ಹಾಜರಿದ್ದರು. ಔರಾದ್ ಹಾಗೂ ಕಮಲನಗರ ಸೇರಿ ಒಟ್ಟು 255 ಬೂತ್‍ಗಳಲ್ಲಿ ಮತದಾನ ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT