ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾಲ್ಕಿ: ಲೋಕಾಯುಕ್ತ ಕಾನೂನು ಅರಿವು ಕಾರ್ಯಕ್ರಮ

Published 30 ಜೂನ್ 2024, 14:29 IST
Last Updated 30 ಜೂನ್ 2024, 14:29 IST
ಅಕ್ಷರ ಗಾತ್ರ

ಭಾಲ್ಕಿ: ಪಟ್ಟಣದ ಭೀಮಣ್ಣಾ ಖಂಡ್ರೆ ತಾಂತ್ರಿಕ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಲೋಕಾಯುಕ್ತ ಕುರಿತ ಕಾನೂನು ಅರಿವು ಕಾರ್ಯಕ್ರಮವನ್ನು‌ ಸಿವಿಲ್ ನ್ಯಾಯಾಧೀಶ, ತಾಲ್ಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಆನಂದ ಕೊಣ್ಣೂರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಲೋಕಾಯುಕ್ತದ ಪ್ರಾರಂಭ, ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು. ಲೋಕಾಯುಕ್ತ ಡಿವೈಎಸ್ಪಿ ಎಂ.ಎಂ. ಓಲೇಕಾರ ಮಾತನಾಡಿ, ರಾಜ್ಯವನ್ನು ಭ್ರಷ್ಟಾಚಾರ ಮುಕ್ತವಾಗಿಸಲು ಸಾರ್ವಜನಿಕರು, ವಿದ್ಯಾರ್ಥಿಗಳು ಲೋಕಾಯುಕ್ತದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಲೋಕಾಯುಕ್ತ ಇಲಾಖೆಯ ಪೊಲೀಸ್ ನಿರೀಕ್ಷಕ ಪ್ರದೀಪ ಕೊಳ್ಳಾ ಮಾತನಾಡಿ, ಲೋಕಾಯುಕ್ತ ಕಾಯ್ದೆಯ ಕಲಂ 7ಎ, 7ಬಿ, 8ರ ಬಗ್ಗೆ ಹಾಗೂ ಲೋಕಾಯುಕ್ತದ ಅಡಿಯಲ್ಲಿ ಪ್ರಕರಣಗಳನ್ನು ಹೇಗೆ ದಾಖಲಿಸಬೇಕು ಎಂದು ಕೂಲಂಕಷವಾಗಿ ವಿವರಿಸಿದರು.

ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಸಿದ್ದು ಪಾಟೀಲ, ಆರತಿ ತಿವಾರಿ ಮಾತನಾಡಿದರು. ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ, ಪೊಲೀಸ್ ಉಪ ಅಧೀಕ್ಷಕ ಶಿವಾನಂದ ಪವಡಶೆಟ್ಟಿ, ವೈದ್ಯಾಧಿಕಾರಿ ಡಾ. ಖದೀರ, ರವಿ ಕಲಶೆಟ್ಟಿ, ಪುರಸಭೆಯ ಮುಖ್ಯಾಧಿಕಾರಿ ಸಂಗಮೇಶ ಕಾರಬಾರಿ, ಶಾಂತಿವಧ೯ಕ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಂಕುಶ ಡೋಲೆ, ಬಿಕೆಐಟಿ ಪ್ರಭಾರ ಪ್ರಾಚಾರ್ಯ ಬಿ. ಸೂರ್ಯಕಾಂತ, ವಾರದ್, ಸುನಿಲ್ ಸಂಗಮೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT