ಬೀದರ್/ಹುಮನಾಬಾದ್: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇರೆಗೆ ಚಿಟಗುಪ್ಪ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ವಿಜಯಕುಮಾರ ಎಂಬುವರ ಎರಡು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಬೀದರ್ ತಾಲ್ಲೂಕಿನ ಹೊಸಕನಹಳ್ಳಿ ಗ್ರಾಮ ಹಾಗೂ ಹುಮನಾಬಾದ್ ಪಟ್ಟಣದ ಟೀಚರ್ಸ್ ಕಾಲೊನಿಯಲ್ಲಿನ ಅವರ ಮನೆಗಳ ಮೇಲೆ ದಾಳಿ ನಡೆಸಿ, ಶೋಧ ಕಾರ್ಯ ಮುಂದುವರೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಓಲೇಕರ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.