ಬೀದರ್: ಜಿಲ್ಲೆಯ ಔರಾದ್ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಧೂಳಪ್ಪ ಅವರ ಮನೆ ಮತ್ತು ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ಶೋಧ ಕೈಗೊಂಡಿದ್ದಾರೆ.
.Lokayukta Raid | ದಾವಣಗೆರೆ: ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.
ಧೂಳಪ್ಪ ಅವರಿಗೆ ಸೇರಿದ ಇಲ್ಲಿನ ಗುರುನಗರದಲ್ಲಿನ ಮನೆ, ಔರಾದ್ ಕೃಷಿ ಇಲಾಖೆಯ ಎಡಿ ಕಚೇರಿ, ಮುಧೋಳ ಕೃಷಿ ಇಲಾಖೆಯ ಕಚೇರಿ ಹಾಗೂ ಭಾಲ್ಕಿಯ ಕರಡ್ಯಾಳ ಕಚೇರಿಯಲ್ಲಿ ದಾಖಲೆ ಪತ್ರಗಳನ್ನು ಪರಿಶೀಲಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಧೂಳಪ್ಪ ಅವರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಶೋಧ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
.ಚಿತ್ರದುರ್ಗ: ಕೃಷಿ ಸಹಾಯಕ ನಿರ್ದೇಶಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.