ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಪಶುವೈದ್ಯಕೀಯ ವಿ.ವಿ ನಿವೃತ್ತ ಕುಲಪತಿ, ನೌಕರನ ಮನೆಯಲ್ಲಿ ಲೋಕಾಯುಕ್ತ ಶೋಧ

Published 5 ಡಿಸೆಂಬರ್ 2023, 4:20 IST
Last Updated 5 ಡಿಸೆಂಬರ್ 2023, 4:20 IST
ಅಕ್ಷರ ಗಾತ್ರ

ಬೀದರ್: ಇಲ್ಲಿನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಎಚ್.ಡಿ. ನಾರಾಯಣಸ್ವಾಮಿ ಹಾಗೂ ನೌಕರ ಸುನೀಲಕುಮಾರ ಎಂಬುವರ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ಶೋಧ ಕಾರ್ಯ ಕೈಗೊಂಡಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ದೂರಿಗೆ ಸಂಬಂಧಿಸಿದಂತೆ ನಾರಾಯಣಸ್ವಾಮಿ ಅವರಿಗೆ ಸೇರಿದ ಬೆಂಗಳೂರಿನ ನಿವಾಸ ಹಾಗೂ ಸುನೀಲಕುಮಾರ ಎಂಬುವರಿಗೆ ಸೇರಿದ ನಗರದ ಮೈಲೂರ ಕ್ರಾಸ್ ಸಮೀಪದ ಮನೆ ಹಾಗೂ ಕಾಂಪ್ಲೆಕ್ಸ್ ನಲ್ಲಿ ಸ್ಥಿರ ಹಾಗೂ ಚರ ಆಸ್ತಿಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಸುನೀಲಕುಮಾರ ಅವರು ನಾರಾಯಣಸ್ವಾಮಿ ಅವರಿಗೆ ಆಪ್ತರು ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT