ಬೀದರ್: ಉತ್ತರ ಪ್ರದೇಶದ ವಾರಾಣಸಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಬೀದರ್ನ ಐದು ಜನರ ಮೃತದೇಹಗಳನ್ನು ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಈ ಸಂಬಂಧ ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಮಾಡಲು ನಿರ್ದೇಶನ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ ಕರ್ನಾಟಕದವರೇ ಆದ ಚನ್ನಪ್ಪ ಎಂಬ ಅಧಿಕಾರಿಯಿದ್ದು ಅವರೊಂದಿಗೆ ಮಾತನಾಡಿ, ಮೃತರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ತಿಳಿಸಿರುವುದಾಗಿ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಮೃತರು ಹಾಗೂ ಗಾಯಾಳುಗಳ ಕುಟುಂಬದವರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಬೀದರ್ನ ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿಯೊಂದರ ನಡುವೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
.ವಾರಾಣಸಿ ಸಮೀಪ ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ಬೀದರ್ನ ಐವರ ಸಾವು.Mylara Karnika 2025 | ಕಾರಣಿಕ ಎಂಬ ಮಹಾಕುಂಭಮೇಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.