ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹರ್ಷಿ ವಾಲ್ಮೀಕಿ ಕೊಡುಗೆ ಅನನ್ಯ’

Last Updated 9 ಅಕ್ಟೋಬರ್ 2022, 15:32 IST
ಅಕ್ಷರ ಗಾತ್ರ

ಬೀದರ್: ‘ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತ್ಯ, ಅಹಿಂಸೆ ಹಾಗೂ ಸೇವಾನಿಷ್ಠೆಯನ್ನು ಪ್ರತಿಪಾದಿಸಿದ್ದಾರೆ. ಪ್ರತಿಯೊಬ್ಬರೂ ರಾಮಾಯಣ ಓದುವ ಮೂಲಕ ಮಹರ್ಷಿಗೆ ಗೌರವ ಸಲ್ಲಿಸಬೇಕು’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ವಿ ವಸಂತಕುಮಾರ ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಾತೃಭೂಮಿ ಸೇವಾ ಪೃತಿಷ್ಠಾನದ ವತಿಯಿಂದ ಹಮ್ಮಿಕೊಂಡ ಕನ್ನಡ ಸ್ವಯಂ ಶಿಕ್ಷಕ ಯೋಜನೆಯ ಪುನಶ್ಚೇತನ ಶಿಬಿರದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ವಾಲ್ಮೀಕಿ ಅವರು ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರು. ವಾಲ್ಮೀಕಿ ಬರೆದ ರಾಮಾಯಣ ಶ್ಲೋಕರೂಪದಲ್ಲಿದೆ. ಅದನ್ನು ಅಧ್ಯಯನ ಮಾಡಿ ತಿಳಿದುಕೊಳ್ಳಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಮಾತೃಭೂಮಿ ಸೇವಾ ಪ್ರತಿಷ್ಠಾನದ ಸಂಸ್ಥಾಪಕ ಕಾರ್ಯದರ್ಶಿ ಗುರುನಾಥ ರಾಜಗೀರಾ ಮಾತನಾಡಿ,‘ಕಳೆದ ಏಳು ತಿಂಗಳಿಂದ ಜಿಲ್ಲೆಯ 43 ಹಳ್ಳಿಗಳಲ್ಲಿ ಸಾಂಸ್ಕೃತಿಕ ಚಟುವಟಿಕೆ ಮೂಲಕ ಕನ್ನಡ ಕಲಿಸುವ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ’ ಎಂದು ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ.ಎನ್, ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಪ್ಪಗೆರೆ ಸೋಮಶೇಖರ, ಸಾಹಿತ್ಯ ಅಕಾಡೆಮಿಯ ಸದಸ್ಯೆ ಛಾಯಾ ಭಗವತಿ, ತಾಲ್ಲೂಕು ಮೇಲ್ವಿಚಾರಕರಾದ ನಟರಾಜ, ವಿನೋದ ಪಾಟೀಲ, ಈಶ್ವರ ರುಮ್ಮಾ ಹಾಗೂ ಮಲ್ಲಿಕಾರ್ಜುನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT