ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌ | 8ರಂದು ವಿವಿಧೆಡೆ ಮಹಾಶಿವರಾತ್ರಿ ಕಾರ್ಯಕ್ರಮ

Published 6 ಮಾರ್ಚ್ 2024, 16:18 IST
Last Updated 6 ಮಾರ್ಚ್ 2024, 16:18 IST
ಅಕ್ಷರ ಗಾತ್ರ

ಬೀದರ್‌: ವಿವಿಧ ಸಂಘ ಸಂಸ್ಥೆಗಳು, ಮಠ ಮಾನ್ಯಗಳಿಂದ ಮಾ. 8ರಂದು ನಗರದಲ್ಲಿ ಮಹಾಶಿವರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವರ ಇಂತಿದೆ.

ಡಾ. ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯ:

8ರಂದು ಬೆಳಿಗ್ಗೆ 11.30ಕ್ಕೆ ಪ್ರಸಾದ ನಿಲಯದಲ್ಲಿ ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ್ದೇವರು, ಮಹಾಲಿಂಗ ಸ್ವಾಮೀಜಿ ಅವರು ಸಾಮೂಹಿಕ ಇಷ್ಟಲಿಂಗ ಪೂಜೆ, ಶಿವಶರಣರ ಸ್ಮರಣೋತ್ಸವ ಕಾರ್ಯಕ್ರಮ ನಡೆಸಿಕೊಡುವರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗುರುಬಸವ ಪಟ್ಟದ್ದೇವರು ಮನವಿ ಮಾಡಿದ್ದಾರೆ.

ಸಿದ್ಧಾರೂಢ ಮಠ:

ನಗರದ ಸಿದ್ಧಾರೂಢ ಮಠದಲ್ಲಿ‌ ಮಠದ ಪೀಠಾಧಿಪತಿ ಶಿವಕುಮಾರ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಮಾ. 8 ರಂದು ಮಹಾಶಿವರಾತ್ರಿ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 6ಕ್ಕೆ ಸಾಮೂಹಿಕ ಲಿಂಗಪೂಜೆ, ಸಿದ್ಧಾರೂಢರ ಮಹಾ ಅಭಿಷೇಕ, ಹನ್ನೆರಡು ಜ್ಯೋತಿರ್ಲಿಂಗಗಳ ಪೂಜೆ, ಪ್ರವಚನ, ಮಹಾ ಮಂಗಳಾರತಿ ನಡೆಯಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಠದ ಆಡಳಿತಾಧಿಕಾರಿ ಹಾವಗಿರಾವ್ ಮೈಲಾರೆ ಮನವಿ ಮಾಡಿದ್ದಾರೆ.

ರಾಮಕೃಷ್ಣ ವಿವೇಕಾನಂದ ಆಶ್ರಮ:

ಪಾಪನಾಶ ಸಮೀಪದ ಆಶ್ರಮದಲ್ಲಿ ಮಾರ್ಚ್‌ 8ರಂದು ಸಂಜೆ 6ಕ್ಕೆ ಮಹಾಶಿವರಾತ್ರಿ, ಮಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜ್ಯೋತಿರ್ಮಯಾನಂದ ಸ್ವಾಮೀಜಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT